Site icon PowerTV

ವಿಷಪೂರಿತ ಆಹಾರ ಸೇವನೆ ಮಾಡಿ 75ಕ್ಕೂ ಹೆಚ್ಚು ಜನ ಅಸ್ವಸ್ಥ.!

ದಾವಣಗೆರೆ; ವಿಷಪೂರಿತ ಆಹಾರ ಸೇವನೆ ಮಾಡಿ 75ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ನಡೆದಿದೆ.

ಕಬ್ಬಯ್ಯರ ರಂಗಪ್ಪ ಅವರ ಮನೆ ತೊಟ್ಟಿಲು ಕಾರ್ಯಕ್ರಮ ಹಿನ್ನಲೆಯಲ್ಲಿ ಕಾರ್ಯಕ್ರಮಕ್ಕೆ ಬಂದಿದ್ದ ಹಲವರು ಆಹಾರ ಸೇವನೆ ಮಾಡಿದ್ದಾರೆ. ಬಳಿಕ ಫುಡ್ ಪಾಯಿಸನ್ ಆಗಿ ಅಸ್ವಸ್ಥಗೊಂಡಿದ್ದಾರೆ.

ಸದ್ಯ ಅಸ್ವಸ್ಥಗೊಂಡ 75ಕ್ಕೂ ಹೆಚ್ಚು ಜನರನ್ನ ನ್ಯಾಮತಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನುಳಿದ ಐವರನ್ನ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Exit mobile version