Site icon PowerTV

ಚಿಕಿತ್ಸೆ ಫಲಕಾರಿಯಾಗದೆ ಹಿರಿಯ ನಟ ಲೋಹಿತಾಶ್ವ ನಿಧನ

ಬೆಂಗಳೂರು : ಕಳೆದ ಒಂದು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ನಟ ಲೋಹಿತಾಶ್ವ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನ ಹೊಂದಿದ್ದಾರೆ.

ತುಮಕೂರಿನ ತೊಂಡಿಗೇರಿ ಗ್ರಾಮದ ಹಿರಿಯ ನಟ ಲೋಹಿತಾಶ್ವ (85)ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ 2.45ಕ್ಕೆ ಕೊನೆಯುಸಿರೆಳೆದಿದ್ದಾರೆ.

500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟನೆ ಮಾಡಿದ್ದ ಹಿರಿಯ ನಟ ಲೋಹಿತಾಶ್ವ ಅವರು, ಸ್ಯಾಂಡಲ್​ವುಡ್​ನ ದಿಗ್ಗಜರಾದ ರಾಜ್​ಕುಮಾರ್​, ವಿಷ್ಣುವರ್ಧನ್​, ಅಂಬರೀಶ್​, ಶಂಕರ್​ನಾಗ್​ ಸೇರಿದಂತೆ ಇನ್ನೀತರರ ನಟರ ಜೊತೆ ಬಣ್ಣ ಹಚ್ಚಿದ್ದಾರೆ.

Exit mobile version