Site icon PowerTV

ಗದಗ: ಶಿರಹಟ್ಟಿ ಪಟ್ಟಣದಲ್ಲಿ ಇಂದು ಜನ ಸಂಕಲ್ಪ ಯಾತ್ರೆ

ಗದಗ:ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ಇಂದು ಜನ ಸಂಕಲ್ಪ ಯಾತ್ರೆ ನಡೆಯಲಿದೆ. ಬಿಎಸ್ ಯಡಿಯೂರಪ್ಪ ಹಾಗೂ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ.

ಪಟ್ಟಣದ ಎಫ್ ಎಂ ಡಬಾಲಿ‌ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮ ಸುಮಾರು
10:30 ಕ್ಕೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ‌ ಭಾಗಿಯಾಗಲಿರುವ ಸಚಿವ, ಶಾಸಕರು. ಸಚಿವ ಸಿಸಿ ಪಾಟೀಲ, ಉಸ್ತುವಾರಿ ಸಚಿವ ಬಿಸಿ ಪಾಟೀಲ ಸೇರಿದಂತೆ ಸ್ಥಳೀಯ ನಾಯಕರು ಭಾಗಿಯಾಗಲಿದ್ದಾರೆ.

ಕಾರ್ಯಕ್ರಮದಲ್ಲಿ 35 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯಿದೆ. ಸಭಾ ಕಾರ್ಯಕ್ರಮದ ನಂತರ ಶಿರಹಟ್ಟಿ ಫಕೀರೇಶ್ವರ ಮಠಕ್ಕೆ ಸಿಎಂ ಭೇಟಿ ನೀಡುವ ಸಾಧ್ಯತೆ.ಮಧ್ಯಾಹ್ನ 1:30 ಕ್ಕೆ ಹೆಲಿಕಾಪ್ಟರ್ ಮೂಲಕ ಹಾವೇರಿಗೆ ಪ್ರಯಾಣ ಬೆಳಸಲಿರುವ ಸಿಎಂ.

Exit mobile version