Site icon PowerTV

“ಗಂಧದಗುಡಿ” ಉಚಿತ ಪ್ರದರ್ಶನಕ್ಕೆ ಮನವಿ

ದಿ. ಪುನೀತ್ ರಾಜ್ ಕುಮಾರ್ ಅಭಿನಯದ ಗಂಧದಗುಡಿ ಕನ್ನಡ ಚಲನಚಿತ್ರವನ್ನು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಉಚಿತವಾಗಿ ಪ್ರದರ್ಶನ ಮಾಡಲು ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ.

ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಎನ್.ಆರ್. ರಮೇಶ್, ಸಿಎಂ ಬೊಮ್ಮಾಯಿ‌ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಗಂಧದಗುಡಿ ಚಲನಚಿತ್ರವು ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳೂ ಸೇರಿದಂತೆ ಎಲ್ಲ ಶಾಲೆಗಳಲ್ಲಿ ಮಕ್ಕಳಿಗೆ ಉಚಿತವಾಗಿ ಪ್ರದರ್ಶನ ಮಾಡಲು ವ್ಯವಸ್ಥೆ ಮಾಡುವ ಮೂಲಕ ಬಗ್ಗೆ ಅರಿವು ಮೂಡಿಸಿದಂತಾಗುತ್ತದೆ.

ಇನ್ನು, ಎಲ್ಲಾ ಶಾಲಾ-ಕಾಲೇಜುಗಳಲ್ಲಿ “ಗಂಧದಗುಡಿ ಚಲನಚಿತ್ರ’ದ ಉಚಿತ ಪ್ರದರ್ಶನ ನೀಡುವ ಬಗ್ಗೆ ರಾಜ್ಯ ಸರ್ಕಾರವು ಮುತುವರ್ಜಿ ವಹಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ಎನ್.ಆರ್. ರಮೇಶ್ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

Exit mobile version