Site icon PowerTV

ರಾಜ್ಯದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ತರಲು ಜನರಿಂದ ಸಂಕಲ್ಪ; ಸಿದ್ದರಾಮಯ್ಯ

ಹುಬ್ಬಳ್ಳಿ; ರಾಜ್ಯದಲ್ಲಿ ಬಿಜೆಪಿಯನ್ನು ಕಿತ್ತೊಗೆದು ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು ಅಂತ ಜನ ಸಂಕಲ್ಪ ಮಾಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್​ ಅಧಿಕಾರಕ್ಕೆ ತರಲು ಜನರು ಸಂಕಲ್ಪ ಮಾಡಿದ್ದಾರೆ. ಹೀಗಾಗಿ ಬಿಜೆಪಿ ಜನ ಸಂಕಲ್ಪ ಯಾತ್ರೆಯಲ್ಲಿ ಜನಾನೇ ಸೇರುತ್ತಿಲ್ಲ. ಬಂದವರನ್ನು ಕೂಡಿ ಹಾಕುವ ಪರಿಸ್ಥಿತಿ ಬಿಜೆಪಿಯದ್ದಾಗಿದೆ. ಮಂಡ್ಯದಲ್ಲಿ ಯಾರೂ ಎದ್ದು ಹೋಗಬಾರದೆಂದು ಬೀಗ ಹಾಕಿದರು ಎಂದರು.

ಆರ್ಥಿಕವಾಗಿ ಹಿಂದುಳಿದವರಿಗೆ ಶೇ 19 ಮೀಸಲಾತಿ ಕುರಿತು ಸುಪ್ರೀಂ ತೀರ್ಪು ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಸುಪ್ರೀಂ ಕೋರ್ಟ್ ಕೊಟ್ಟ ತೀರ್ಪು ಇನ್ನೂ ಓದಿಲ್ಲ. ಆದರೆ ಸಂವಿಧಾನದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಪ್ರತ್ಯೇಕ ಮೀಸಲಾತಿ ಕೊಡೋಕೆ ಬರುವುದಿಲ್ಲ. ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮಾತ್ರಾ ಮೀಸಲಾತಿ ಕೊಡೋಕೆ ಬರುತ್ತದೆ. ಸುಪ್ರೀಂಕೋರ್ಟ್ ತೀರ್ಪು ಓದಿದ ನಂತರ ಈ ಕುರಿತು ಪ್ರತಿಕ್ರಿಯಿಸುತ್ತೇನೆ.

ಹಿಂದೂ ಪದದ ಕುರಿತು ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ಈಗಾಗಲೇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುರ್ಜೆವಾಲ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಪ್ರತಿಕ್ರಿಯೆಯೇ ನಮ್ಮ ನಿಲುವು  ಆಗಿದೆ ಎಂದರು.

Exit mobile version