Site icon PowerTV

ಸತೀಶ್ ಜಾರಕಿಹೊಳಿ ವಿರುದ್ಧ ಅರುಣ್ ಸಿಂಗ್ ಆಕ್ರೋಶ

ಬೆಂಗಳೂರು:ಸತೀಶ್ ಜಾರಕಿಹೊಳಿ ವಿರುದ್ಧ ಅರುಣ್ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಯಾವಾಗಲೂ ನಮ್ಮ ಸಂಸ್ಕೃತಿಯನ್ನು ಹೀಯಾಳಿಸಿಕೊಂಡು ಬರುತ್ತಿದೆ.

ರಾಹುಲ್ ಗಾಂಧಿ ಅನೇಕ ದೇವಸ್ಥಾನಗಳಿಗೆ ಭೇಟಿ ನೀಡುತ್ತಾರೆ. ಆದರೆ ಕಾಂಗ್ರೆಸ್ ಪಕ್ಷದ ಶಾಸಕರು ಇತರ ಹೇಳಿಕೆಗಳನ್ನು ಕೊಡುತ್ತಾರೆ. ಈ ನಿಂದನೆ ಮಾಡಿರುವುದು ಸರಿಯಲ್ಲ,ರಾಜ್ಯದ ಜನರು ಇದಕ್ಕೆ ಉತ್ತರ ನೀಡುತ್ತಾರೆ. ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ನವರು ಕ್ರಮ ತೆಗೆದುಕೊಳ್ಳಬೇಕು. ಇಲ್ಲವಾದರೆ ಡಿಕೆ ಸಿದ್ದರಾಮಯ್ಯ ರಾಹುಲ್ ಗಾಂಧಿ ಮೂರು ಜನ ಇದನ್ನು ಒಪ್ಪಿಕೊಂಡಂತೆ ಆಗುತ್ತದೆ.ಅವರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಇಲ್ಲಿನವರೇ,ಮಲ್ಲಿಕಾರ್ಜುನ್ ಖರ್ಗೆ ಅವರು ಇದರ ಬಗ್ಗೆ ಗಮನ ಹರಿಸಬೇಕು ಅರುಣ್ ಸಿಂಗ್ ಹೇಳಿಕೆ ನೀಡಿದ್ದಾರೆ.

Exit mobile version