Wednesday, September 10, 2025
HomeUncategorizedಜನ ಸಂಕಲ್ಪ ಯಾತ್ರೆಗೆ ಜನಾನೇ ಬರ್ತಿಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ

ಜನ ಸಂಕಲ್ಪ ಯಾತ್ರೆಗೆ ಜನಾನೇ ಬರ್ತಿಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ : BJP ಜನ ಸಂಕಲ್ಪ ಯಾತ್ರೆಯಲ್ಲಿ ಜನಾನೇ ಬರ್ತಿಲ್ಲ. ಬಂದವರನ್ನು ಕೂಡಿ ಹಾಕುವ ಪರಿಸ್ಥಿತಿ ಬಿಜೆಪಿಯದ್ದಾಗಿದೆ. BJPಯನ್ನು ಕಿತ್ತೊಗೆದು ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು ಅಂತ ಜನ ಸಂಕಲ್ಪ ಮಾಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ BJP ಜನಸಂಕಲ್ಪ ಯಾತ್ರೆಯನ್ನು ಲೇವಡಿ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ BJP ಸಭೆಯಿಂದ ಯಾರೂ ಎದ್ದು ಹೋಗಬಾರದೆಂದು ಬೀಗ ಹಾಕಿದ್ರು ಎಂದು ಅಪಹಾಸ್ಯ ಮಾಡಿದ್ರು. ಆರ್ಥಿಕವಾಗಿ ಹಿಂದುಳಿದವರಿಗೆ ಶೇಕಡಾ 19 ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್​​​ ತೀರ್ಪು ನೀಡಿರುವ ವಿಚಾರ ಕುರಿತು ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಕೊಟ್ಟ ತೀರ್ಪು ಇನ್ನೂ ಓದಿಲ್ಲ. ಆದರೆ ಸಂವಿಧಾನದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಪ್ರತ್ಯೇಕ ಮೀಸಲಾತಿ ಕೊಡೋಕೆ ಆಗಲ್ಲ. ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮಾತ್ರಾ ಮೀಸಲಾತಿ ಕೊಡಲು ಸಾಧ್ಯವಿದೆ. ಸುಪ್ರೀಂ ಕೋರ್ಟ್ ತೀರ್ಪು ಓದಿದ ನಂತರ ಈ ಕುರಿತು ಪ್ರತಿಕ್ರಿಯಿಸ್ತೇನೆ ಎಂದರು.

ಇನ್ನು, ಹಿಂದೂ ಪದದ ಅರ್ಥ ಅಶ್ಲೀಲ ಎಂದು ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ ವಿಚಾರ ಕುರಿತು ಮಾತನಾಡಿದ ಸಿದ್ದರಾಮಯ್ಯ, ಈಗಾಗಲೇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುರ್ಜೆವಾಲ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಪ್ರತಿಕ್ರಿಯೆಯೇ ನಮ್ಮ ನಿಲುವು ಎಂದು ಹೇಳಿದರು.

RELATED ARTICLES
- Advertisment -
Google search engine

Most Popular

Recent Comments