Wednesday, September 3, 2025
HomeUncategorizedಪ್ರಧಾನಿ ಭೇಟಿ ಹಿನ್ನೆಲೆ, ನಾಳೆ ಸಂಚಾರ ಅಸ್ತವ್ಯಸ್ತ

ಪ್ರಧಾನಿ ಭೇಟಿ ಹಿನ್ನೆಲೆ, ನಾಳೆ ಸಂಚಾರ ಅಸ್ತವ್ಯಸ್ತ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಬೆಂಗಳೂರು ಭೇಟಿ ಹಿನ್ನೆಲೆ, ಸಂಚಾರ ಹಾಗೂ ಭದ್ರತಾ ದೃಷ್ಟಿಯಿಂದ ಸಂಚಾರಿ ಮಾರ್ಗಗಳ ಮಾರ್ಪಾಡು. ನ.11 ಬೆಳಿಗ್ಗೆ 8ರಿಂದ ಮದ್ಯಾಹ್ನ 2ರವರೆಗೆ ಕೆಳಕಂಡ ರಸ್ತೆಗಳಲ್ಲಿ ಸಾರ್ವಜನಿಕ ಸಂಚಾರ ಬಂದ್ ಆಗಲಿದ್ದು, ಸಿಟಿಓ ಜಂಕ್ಷನ್, ಪೊಲೀಸ್ ತಿಮ್ಮಯ್ಯ ಜಂಕ್ಷನ್, ರಾಜಭವನ ರಸ್ತೆ, ಬಸವೇಶ್ವರ ಸರ್ಕಲ್, ಪ್ಯಾಲೇಸ್ ರಸ್ತೆ, ರೇಸ್ ಕೋರ್ಸ್ ರಸ್ತೆ, ಸ್ಯಾಂಕಿ ರಸ್ತೆ, ಕ್ವೀನ್ಸ್ ರಸ್ತೆ, ಬಳ್ಳಾರಿ ರಸ್ತೆ, ಏರ್ ಪೋರ್ಟ್ ಎಲಿವೇಟೆಡ್ ಕಾರಿಡಾರ್ ರಸ್ತೆ,ಶೇಷಾದ್ರಿ ರಸ್ತೆಯಲ್ಲಿ – ಮಹಾರಾಣಿ ಬ್ರಿಡ್ಜ್ ನಿಂದ – ರೈಲ್ವೆ ಸ್ಟೇಷನ್ ಪ್ರವೇಶ ದ್ವಾರದವರೆಗೆ ಹಾಗೂ ಕೆ.ಜಿ ರಸ್ತೆಯಲ್ಲಿ – ಶಾಂತಲಾ ಜಂಕ್ಷನ್ ನಿಂದ ಮೈಸೂರು ಬ್ಯಾಂಕ್‌ ಸರ್ಕಲ್ ವರೆಗೆ, ವಾಟಾಳ್ ನಾಗರಾಜ್ ರಸ್ತೆಯಲ್ಲಿ – ಕೋಡೆ ಅಂಡರ್ ಪಾಸ್ ನಿಂದ ಪಿ.ಎಫ್ ವರೆಗೆ, ಇಂಟರ್‌ನ್ಯಾಷನಲ್ ಏ‌ಪೋರ್ಟ್‌ನ ಸುತ್ತ ಮತ್ತಲಿನ ರಸ್ತೆಗಳಲ್ಲಿ ಸಂಚಾರ ನಿರ್ಬಂಧವಾಗಲಿದೆ.

ಪರ್ಯಾಯ ಮಾರ್ಗಗಳು, ಮೈಸೂರು ಬ್ಯಾಂಕ್‌ ವೃತ್ತದಿಂದ ಪ್ಯಾಲೇಸ್ ರಸ್ತೆಗೆ ಬರುವ ವಾಹನ ಸವಾರರು ಕೆ.ಜಿ. ರಸ್ತೆಯ ಮೂಲಕ
ಎಲ್‌ಆರ್‌ಡಿಇ ವೃತ್ತದಿಂದ ಬಸವೇಶ್ವರ ವೃತ್ತದ ಕಡೆಗೆ ಸಂಚರಿಸುವವರು ರಾಜಭವನ ರಸ್ತೆ ಮೂಲಕ ಮುಂದೆ ಟ್ರಿಲೈಟ್ ಜಂಕ್ಷನ್ ನಿಂದ ಮೌರ್ಯ ಜಂಕ್ಷನ್ ಮೂಲಕ ಬರುವವರು ರೇಸ್‌ ವ್ಯೂವ್ ಸರ್ಕಲ್‌ನಲ್ಲಿ – ಶಿವಾನಂದ ಸರ್ಕಲ್‌ನಲ್ಲಿ ಎಡತಿರುವು ನೆಹರು ಸರ್ಕಲ್ ಮೂಲಕ ಕೆಕೆ ರಸ್ತೆ ಮೂಲಕ ವಿಂಡ್ಸ್‌ ಮ್ಯಾನರ್ ವೃತ್ತಕ್ಕೆ ತೆರಳುವ ವಾಹನ ಸವಾರರು ಶಿವಾನಂದ ಸರ್ಕಲ್‌ನಲ್ಲಿ – ನೆಹರು ಸರ್ಕಲ್‌ ಮೂಲಕ ಬಿಹೆಚ್‌ ಇಎಲ್ ಸರ್ಕಲ್‌ನಿಂದ ಮೇಕ್ರಿ ಸರ್ಕಲ್ ಕಡೆಗೆ ಬರುವ ವಾಹನ ಸವಾರರು ಸದಾಶಿವನಗರ ಪೊಲೀಸ್ ಠಾಣೆ – ಮಾರಮ್ಮ ಸರ್ಕಲ್ – ಮಾರ್ಗೋಸ ರಸ್ತೆ ಮೂಲಕ‌ ಭಾಷ್ಯಂ ಸರ್ಕಲ್‌ನಿಂದ ಕಾವೇರಿ ಜಂಕ್ಷನ್ ಕಡೆಗೆ ಬರುವ ವಾಹನ ಸವಾರರು ಮಲ್ಲೇಶ್ವರಂ 18ನೇ ಕ್ರಾಸ್ – ಮಾರ್ಗೋಸ ರಸ್ತೆಯ ಮೂಲಕ ಕ್ವೀನ್ಸ್ ವೃತ್ತದಿಂದ ಸಿ.ಟಿ.ಓ, ಕಡೆಗೆ ಬರುವ ವಾಹನ ಸವಾರರು ಸಿದ್ದಲಿಂಗಯ್ಯ ವೃತ್ತ – ಆರ್.ಆರ್.ಎಂ.ಆರ್. ರಸ್ತೆಯ ಮೂಲಕ ಬಾಳೇಕುಂದ್ರಿ ಜಂಕ್ಷನ್‌ನಿಂದ ಮೆಜೆಸ್ಟಿಕ್ ಕಡೆಗೆ ಸಂಚರಿಸುವ ವಾಹನಗಳು ಕನ್ನಿಂಗ್ ಹ್ಯಾಂ ರಸ್ತೆ ಮೂಲಕ ಸಂಚರಿಸಲು‌ ಅವಕಾಶ ಮಾಡಿಕೊಡಲಾಗಿದೆ.

RELATED ARTICLES
- Advertisment -
Google search engine

Most Popular

Recent Comments