Site icon PowerTV

 ಕೆಂಪೇಗೌಡ ಪುತ್ಥಳಿ ಮುಂದೆ ಜೆಡಿಎಸ್ ಪ್ರತಿಭಟನೆ

ಬೆಂಗಳೂರು : ನಿನ್ನೆಯಷ್ಟೇ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೋದಿ ಲೋಕಾರ್ಪಣೆ ಮಾಡಿದ 108 ಅಡಿ ಕಂಚಿನ ಕೆಂಪೇಗೌಡ ಪುತ್ಥಳಿ ಮುಂದೆ ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಎಂಎಲ್ಸಿ ಶರವಣ ಮತ್ತು ಎಂಎಲ್ಎ ನಿಸರ್ಗ ನಾರಾಯಣಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದರು. ಕೆಂಪೇಗೌಡ ಪುತ್ಥಳಿ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವೇಗೌಡರನ್ನು ಆಹ್ವಾನ ಮಾಡದ ಕಾರಣಕ್ಕೆ ಹಾಗೂ ಸ್ಥಳೀಯ ಶಾಸಕ ನಿಸರ್ಗ ನಾರಾಯಣಸ್ವಾಮಿ ರನ್ನು ನಿರ್ಲಕ್ಷ್ಯ ಮಾಡಿದ ಕಾರಣ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Exit mobile version