Site icon PowerTV

ಕೂತುಹಲ ಮೂಡಿಸಿದ ಮಾಜಿ ಸಿಎಂ ಸಿದ್ದು ಕೋಲಾರ ಭೇಟಿ..!

ಬೆಂಗಳೂರು: ಶ್ರೀ ಕೋಲಾರಮ್ಮ ದೇವಾಲಯಕ್ಕೆ ನಾಳೆ ಸಿಎಂ ಸಿದ್ಧರಾಮಯ್ಯ ಭೇಟಿ ನೀಡಲಿದ್ದಾರೆ. ನಾಳೆ ಸಿದ್ಧರಾಮಯ್ಯ ರವರು ಸಾಕಷ್ಟು ಕಾರ್ಯಕ್ರಮವನ್ನು ಹಮ್ಮಿ ಕ್ಕೊಂಡಿರುವುದು ರಾಜಕೀಯ ವಲಯದಲ್ಲಿ ಸಾಕಷ್ಟು ಕೂತುಹಲ ಮೂಡಿಸಿದೆ.

ಇನ್ನು ನಾಳೆ ಸಿದ್ಧರಾಮಯ್ಯ ರವರು ಮೆಥೋಡಿಸ್ಟ್ ಚರ್ಚ್‌ಗೆ, ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ, ಕಾಲೇಜ್ ಸರ್ಕಲ್
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ, ಇಟಿಸಿಎಂ ವೃತ್ತ, ಮಹಾತ್ಮ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ
ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಮಾಲಾರ್ಪಣೆ,ಬಂಗಾರಪೇಟೆ ವೃತ್ತ, ಕನಕ ಮಂದಿರಕ್ಕೆ ಭೇಟಿ, ಯೋಗಿ ಶ್ರೀ ನಾರಾಯಣ ಯತೀಂದ್ರ ಪ್ರತಿಮೆಗೆ ಮಾಲಾರ್ಪಣೆ, ದರ್ಗಾಕ್ಕೆ ಭೇಟಿ, ಕ್ಲಾಕ್‌ ಟವರ್, ನರಸಾಪುರ ಕೆರೆ ವೀಕ್ಷಣೆ ಈಗೆ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕ್ಕೊಂಡಿದ್ದಾರೆ.

ಇನ್ನು ಇವರ ಕೋಲಾರ ಭೇಟಿಗೆ ಕಾಂಗ್ರೆಸ್ ಪಕ್ಷದ ಮುಖಂಡರು, ವಿವಿಧ ಸಂಘ ಸಂಸ್ಥೆಗಳ, ಪದಾಧಿಕಾರಿಗಳು ಸಾತ್ ನೀಡಲಿದ್ದಾರೆ. ಸಿದ್ಧರಾಮಯ್ಯ ರವರ ಕೋಲಾರ ಭೇಟಿ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ.

Exit mobile version