Site icon PowerTV

ಕುಂದಾನಗರಿ ಬೆಳಗಾವಿಯಲ್ಲಿ ಸರಣಿ ಅಪಘಾತ, ಓರ್ವ ಸಾವು

ಬೆಳಗಾವಿ : ಕುಂದಾನಗರಿ ಬೆಳಗಾವಿಯಲ್ಲಿ ಸರಣಿ ಅಪಘಾತ, ಓರ್ವ ಸಾವನ್ನಪ್ಪಿದ ಘಟನೆ ಬಡೆಕೊಳ್ಳ ಮಠದ ಹೆದ್ದಾರಿ ಬಳಿ ನಡೆದಿದೆ.

ಟ್ರ್ಯಾಕ್ಟರ್ ಚಾಲಕ ಮೆಹಬೂಬ್ ಸುಭಾನಿ (20) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಾಲ್ಕು ಜನರಿಗೆ ಗಂಭೀರ ಗಾಯ, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೊದಲು ಲಾರಿ ಹಾಗೂ ಟ್ರ್ಯಾಕ್ಟರ್ ನಡುವೆ ಡಿಕ್ಕಿಯಾಗಿದ್ದು, ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಟ್ರ್ಯಾಕ್ಟರ್ ಮುಂದೆ ಚಲಿಸುತ್ತಿದ್ದ ಬೈಕ್​ಗೆ ಡಿಕ್ಕಿಯಾಗಿದೆ.

ಇನ್ನು, ಬೈಕ್ ಸವಾರರು ಹಾಗೂ ಲಾರಿ ಕ್ಲೀನರ್​ಗೆ ಗಂಭೀರ ಗಾಯಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ನಡೆದಿದ್ದು, ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Exit mobile version