Site icon PowerTV

ಗೊಂದಲದ ಗೂಡಾದ ಶಿವಮೊಗ್ಗ ವಿಧಾನಸಭಾ ಕ್ಷೇತ್ರ..!

ಶಿವಮೊಗ್ಗ:ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಹಿಂದುಳಿದ ವರ್ಗಗಳ ನಾಯಕರು, ಸಹಕಾರಿ ಹಾಗೂ ಧಾರ್ಮಿಕ ಕ್ಷೇತ್ರದ ಪ್ರಮುಖರು ಹಾಗೂ ಮಾಜಿ ಶಿವಮೊಗ್ಗ ಮಹಾನಗರಪಾಲಿಕೆ ಮೇಯರ್ ಎಸ್.ಕೆ. ಮರಿಯಪ್ಪ ಮತ್ತು ಮಾಜಿ ಶಾಸಕ ಪ್ರಸನ್ನ ಕುಮಾರ್, ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಕಾಂಗ್ರೆಸ್ ಚುನಾವಣಾಧಿಕಾರಿಗೆ ತಮ್ಮ ನಾಮಪತ್ರ ಅರ್ಜಿ ಸಲ್ಲಿಸಿದ್ದಾರೆ.

ಅಂದಹಾಗೆ, ಎಸ್.ಕೆ. ಮರಿಯಪ್ಪ, ಹಾಲಿ ಹೌಸಿಂಗ್ ಸೊಸೈಟಿ ಹಾಗೂ ಕೋಟೆ ಶ್ರೀ ಮಾರಿಕಾಂಬಾ ದೇವಾಲಯ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನಗರದ ವಿವಿಧ ವಾರ್ಡುಗಳಲ್ಲಿ ಸ್ಪರ್ಧಿಸಿ ಐದು ಬಾರಿ ಕಾರ್ಪೋರೇಟರ್ ಆಗಿ ಗೆದ್ದ ಹಿರಿಮೆ ಹೊಂದಿದ್ದಾರೆ.

ಶಿವಮೊಗ್ಗದ ಪ್ರತಿಷ್ಠಿತ ಸಿಟಿ ಬ್ಯಾಂಕ್ ಅಧ್ಯಕ್ಷರಾಗಿ, ಹಾಲಿ ನಿರ್ದೇಶಕರಾಗಿ ಮರಿಯಪ್ಪ ಸೇವೆ ಸಲ್ಲಿಸುತ್ತಿದ್ದಾರೆ. ಜಿಲ್ಲಾ ಸಹಕಾರಿ ಯೂನಿಯನ್ ಮತ್ತು ಎಪಿಎಂಸಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ನೇರ ನಡೆನುಡಿ ಹಾಗೂ ದಕ್ಷ ಆಡಳಿತಕ್ಕೆ ಮರಿಯಪ್ಪರ ಹೆಸರು ಮುಂಚೂಣಿಯಲ್ಲಿದೆ.

ಇನ್ನೂ ಕಳೆದ ಬಾರಿ ಶಿವಮೊಗ್ಗ ಕ್ಷೇತ್ರದ ಶಾಸಕರಾಗಿದ್ದ ಕೆ.ಬಿ. ಪ್ರಸನ್ನ ಕುಮಾರ್ ಅವರು ಕೂಡ ಟಿಕೆಟ್ ಗಾಗಿ ನಾಮಪತ್ರ ಸಲ್ಲಿಸಿದ್ದು, ತಮ್ಮ ಅವಧಿಯಲ್ಲಿ ಉತ್ತಮ ಆಡಳಿತ ನೀಡಿದ ಮತ್ತು ಅಭಿವೃದ್ಧಿ ಮಾಡಿದ ಅನುಭವ ಹೊಂದಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಇವರು ಸಹ ದುಡಿದಿದ್ದು, ಪಕ್ಷ ಯಾರಿಗೆ ಮಣೆ ಹಾಕಲಿದೆ ಎಂಬುದು ಕಾದು ನೋಡಬೇಕಿದೆ.

Exit mobile version