Friday, August 22, 2025
Google search engine
HomeUncategorizedಕೋಲಾರ ಜಿಲ್ಲೆಗೆ ಗ್ರ್ಯಾಂಡ್​ ಎಂಟ್ರಿ ನೀಡಿದ ಸಿದ್ದರಾಮಯ್ಯ

ಕೋಲಾರ ಜಿಲ್ಲೆಗೆ ಗ್ರ್ಯಾಂಡ್​ ಎಂಟ್ರಿ ನೀಡಿದ ಸಿದ್ದರಾಮಯ್ಯ

ಕೋಲಾರ; ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕೋಲಾರ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಜಿಲ್ಲೆಗೆ ಬಂದಿಳಿದ ಸಿದ್ದರಾಮಯ್ಯ ಅವರಿಗೆ ಕಾರ್ಯಕರ್ತರು ಭರ್ಜರಿ ವೆಲ್​ ಕಮ್ ಮಾಡಿದರು.

ಮುಂಬರುವ 2023 ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಅವರು ಕೋಲಾರಿ ಜಿಲ್ಲೆಯಿಂದ ಸ್ಪರ್ಧೆ ಮಾಡಬೇಕೆಂದು ಹಲವು ಕಾಂಗ್ರೆಸ್​ ನಾಯಕರ ಒತ್ತಾಯದ ಬೆನ್ನೆಲ್ಲೇ ಇಂದು ಸಿದ್ದರಾಮಯ್ಯ ಅವರು ಕ್ಷೇತ್ರದ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಕೋಲಾರದಲ್ಲಿನ ವಿವಿಧ ದೇವಸ್ಥಾನಗಳಿಗೆ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಇನ್ನು ಸಿದ್ದರಾಮಯ್ಯ ಅವರು ಕೋಲಾರಕ್ಕೆ ಆಗಮಿಸುತ್ತಿದ್ದಂತೆ ಶಾಸಕರಾದ ರಮೇಶ ಕುಮಾರ್, ಕೃಷ್ಣ ಬೈರೇಗೌಡ, ಜೆಡಿಎಸ್ ನ ಕೆ.ಶ್ರೀನಿವಾಸಗೌಡ ಸ್ವಾಗತಿಸಿದರು.

ಆದರೆ, ಸಿದ್ದರಾಮಯ್ಯ ಆಗಮನ ಹಿನ್ನಲೆಯಲ್ಲಿ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಬಣದವರು ಈ ವಿವಿಧ ಕಾರ್ಯಕ್ರಮಕ್ಕೆ ಗೈರು ಆಗಿದ್ದಾರೆ. ಮಂದಿರ, ಮಸೀದಿ, ಇಗರ್ಜಿಗಳ ಭೇಟಿ ನಂತರ ಕಾರ್ಯಕರ್ತರ ಸಭೆಯಲ್ಲಿ ಸಿದ್ದು ಭಾಗಿಯಾಗಲಿದ್ದಾರೆ.

ಇದಕ್ಕೂ ಮೊದಲು ಇಂದು ಬೆಳಿಗ್ಗೆ ಸಿದ್ದರಾಮಯ್ಯ ಅವರು ಕೋಲಾರಕ್ಕೆ ಪ್ರವಾಸಕ್ಕೆ ಐಷರಾಮಿ ಬಸ್​ನಲ್ಲಿ ಪ್ರಯಾಣ ಬೆಳೆಸಿದರು. ಇಡೀ ದಿನ ಕೋಲಾರದಲ್ಲಿ ಸಿದ್ದರಾಮಯ್ಯ ರೌಂಡ್ಸ್ ನೀಡಲಿದ್ದು, 14 ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಸಂಜೆ ಸ್ಥಳೀಯ ಮುಖಂಡರು, ಸಂಘ ಸಂಸ್ಥೆಗಳೊಂದಿಗೆ ಸಭೆ ನಡೆಸಲಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಬೇಕಾ ಬೇಡ್ವಾ ಎಂದು ಗ್ರೌಂಡ್ ರಿಪೋರ್ಟ್ ಕಲೆಹಾಲಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments