Site icon PowerTV

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅರೆಸ್ಟ್​​

ಕಲಬುರಗಿ : ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆಯನ್ನ ಶೂಟ್ ಮಾಡುವುದಾಗಿ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಮಣಿಕಂಠ ರಾಠೋಡ್ ಹೇಳಿಕೆ ಹಿನ್ನಲೆಯಲ್ಲಿ ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಐಪಿಸಿ ಸೆಕ್ಷನ್ 506 ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಅಲ್ಲದೆ ಮಣಿಕಂಠ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದರು. ಭಾನುವಾರ ಮಧ್ಯರಾತ್ರಿ ಹೈದರಾಬಾದ್‌ ನಲ್ಲಿ ಪೊಲೀಸರು ಬಂಧಿಸಿ ಕಲಬುರಗಿಗೆ ಕರೆ ತಂದಿದ್ದಾರೆ.

Exit mobile version