Site icon PowerTV

ತಮಿಳುನಾಡಿನಲ್ಲಿ ಮುಂದುವರೆದ ಭಾರೀ ಮಳೆ

ತಮಿಳುನಾಡು : ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತದಿಂದ ತಮಿಳುನಾಡಿನಾದ್ಯಂತಭಾರೀ ಮಳೆ ಮುಂದುವರೆದಿದೆ.

ಭಾರತೀಯ ಹವಾಮಾನ ಇಲಾಖೆ ತಮಿಳುನಾಡಿನ ತಿರುವಳ್ಳೂರು, ರಾಣಿಪೇಟ್ ಮತ್ತು ಕಾಂಚೀಪುರಂ ನಾಲ್ಕು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಮಳೆಯ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಮುನೆಚ್ಚರಿಕಾ ಕ್ರಮವಾಗಿ ಮೈಲಾಡುತುರೈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ.

ಚೆನ್ನೈ ಮತ್ತು ಅದರ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಬೆಳಿಗ್ಗೆಯಿಂದ ಮಳೆ ಸುರಿಯುತ್ತಿದೆ. ಶುಕ್ರವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಚೆನ್ನೈನ ಹಲವು ಪ್ರದೇಶಗಳು ಜಲಾವೃತವಾಗಿವೆ. ಮಧುರೈ, ಕಾಂಚೀಪುರಂ ಮತ್ತು ತ್ರಿವಲ್ಲೂರಿನಲ್ಲಿ ನಿರಂತರ ಮಳೆಯ ಕಾರಣ ಕಾಲೇಜುಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ.

Exit mobile version