Site icon PowerTV

ನಟಿ ಜಾಕ್ವೆಲಿನ್ ಫರ್ನಾಂಡೀಸ್​ಗೆ ಜಾಮೀನು ಮಂಜೂರು

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾಗಿಯಾದ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರಿಗೆ ಜಾಮೀನು ಮಂಜೂರು ಮಾಡಿ ದೆಹಲಿ ನ್ಯಾಯಾಲಯ ತೀರ್ಪು ನೀಡಿದೆ.

ಬೆಂಗಳೂರು ಮೂಲದ ಆರೋಪಿ ಸುಕೇಶ್ ಚಂದ್ರಶೇಖರ್ ವಿರುದ್ಧ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ 200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರಿಗೆ ದೆಹಲಿ ಕೋರ್ಟ್ ಮಂಗಳವಾರ ಬಂಧನ ಪೂರ್ವ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಜಾಕ್ವೆಲಿನ್​ಗೆ ಬಿಗ್ ರಿಲೀಫ್ ಸಿಕ್ಕಿದೆ.

ದೆಹಲಿ ನ್ಯಾಯಾಲ ಕಳೆದ ವಾರ ತೀರ್ಪನ್ನು ಕಾಯ್ದಿರಿಸಿದ್ದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಶೈಲೇಂದರ್ ಮಲಿಕ್ ಅವರು ಈ ಆದೇಶವನ್ನು ಪ್ರಕಟಿಸಿದ್ದಾರೆ. 2 ಲಕ್ಷ ರೂ ಮೊತ್ತದ ಶ್ಯೂರಿಟಿ ಬರೆಸಿಕೊಂಡು ಜಾಮೀನು ಮಂಜೂರನ್ನ ನ್ಯಾಯಾಲಯ ನೀಡಿದೆ.

Exit mobile version