Site icon PowerTV

ಅಮೆರಿಕಾ ಅಧ್ಯಕ್ಷ ಸ್ಥಾನದ ಚುನಾವಣೆಗೆ ಡೊನಾಲ್ಡ್ ಟ್ರಂಪ್ ಸ್ಪರ್ಧೆ ಘೋಷಣೆ

ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮುಂಬರುವ 2024ರ ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ.

ಅಮೇರಿಕಾ ಮಾಜಿ ಅಧ್ಯಕ್ಷ 76 ವರ್ಷ ವಯಸ್ಸಿನ ಡೊನಾಲ್ಡ್ ಟ್ರಂಪ್ ಯುಎಸ್ ಫೆಡರಲ್ ಚುನಾವಣಾ ಆಯೋಗಕ್ಕೆ ದಾಖಲೆಗಳನ್ನು ಸಲ್ಲಿಸಿದರು. ರಿಪಬ್ಲಿಕನ್ ಅಥವಾ ಡೆಮಾಕ್ರಟ್ ಪಕ್ಷದಿಂದ ತಮ್ಮ ಉಮೇದುವಾರಿಕೆಯನ್ನು ಅಧಿಕೃತವಾಗಿ ಘೋಷಿಸಿದ ಮೊದಲ ಪ್ರಮುಖ ಸ್ಪರ್ಧಿ ಟ್ರಂಪ್ ಆಗಿದ್ದಾರೆ. ಇಂದು ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಸ್ಥಾನಕ್ಕೆ ನನ್ನ ಉಮೇದುವಾರಿಕೆಯನ್ನು ಘೋಷಿಸುತ್ತಿದ್ದೇನೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

2016 ರಲ್ಲಿ ಹಿಲರಿ ಕ್ಲಿಂಟನ್ ವಿರುದ್ಧ ಗೆಲುವು ಸಾಧಿಸಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿಕೊಂಡಿದ್ದ ಟ್ರಂಪ್ 2020 ರ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡನ್ ಎದುರು ಸೋಲಬೇಕಾಯಿತು.

Exit mobile version