Site icon PowerTV

ಸರ್ಕಾರದ ವಿರುದ್ಧ ಆರದ ರೈತರ ರೋಷಾಗ್ನಿ

ಬಾಗಲಕೋಟೆ : ಕಬ್ಬಿಗೆ ವೈಜ್ಞಾನಿಕ ದರ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ಮುಂದುವರಿದಿದೆ. ಬಾಗಲಕೋಟೆ ಜಿಲ್ಲೆಯ ವಿವಿಧೆಡೆ ರಸ್ತೆ ತಡೆ ನಡೆಸಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಧೋಳ ಪಟ್ಟಣ ಸೇರಿ ಹಲವೆಡೆ ಬೆಂಕಿ ಹಚ್ಚಿ, ಮುಳ್ಳು ಬೇಲಿಗಳನ್ನ ಹಚ್ಚಿ, ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಲಾಯಿತು. ರೈತ ಮುಖಂಡರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್, ಸಕ್ಕರೆ ಸಚಿವ ಶಂಕರ್‌ಪಾಟೀಲ್ ಮುನೇನಕೊಪ್ಪ ಹಾಗೂ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ನಡೆಸಿದ ರೈತರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ಸಂಧಾನ ಸಭೆ ವಿಫಲವಾಗಿದ್ದು ರೈತರ ರೋಷಾಗ್ನಿಯನ್ನು ಮತ್ತಷ್ಟು ಹೆಚ್ಚಿಸಿದೆ.ಇದಕ್ಕೆಲ್ಲಾ ಸರ್ಕಾವೇ ನೇರ ಹೊಣೆ ಎಂದು ಮಾಜಿ ಸಚಿವ ಆರ್​.ಬಿ.ತಿಮ್ಮಾಪುರ ವಾಗ್ದಾಳಿ ನಡೆಸಿದರು.

ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಸಮೀಪ ಇರುವ ಬಸವೇಶ್ವರ ಸಕ್ಕರೆ ಕಾರ್ಖಾನೆ ಎದುರು ಇರುವ ರಾಷ್ಟ್ರೀಯ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸಿದರು. ಒಟ್ಟಿನಲ್ಲಿ ಸರ್ಕಾರದ ವಿರುದ್ಧ ರೈತರ ರೋಷಾಗ್ನಿ ಮುಂದುವರಿದಿದೆ.

Exit mobile version