Site icon PowerTV

ಪೊಲೀಸರ ಕಾರ್ಯಾಚರಣೆ; 132 ಕೆಜಿ ಗಾಂಜಾ ಸೇರಿದಂತೆ ಇಬ್ಬರು ಆರೋಪಿಗಳ ಬಂಧನ

ಮಂಗಳೂರು; ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ 132 ಕೆಜಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಮೀಜ್, ಅಬ್ದುಲ್ ಖಾದರ್ ಬಂಧಿತ ಆರೋಪಿಗಳು, ಆಂಧ್ರದ ವಿಶಾಖಪಟ್ಟಣಂ ಜಿಲ್ಲೆಯಿಂದ ಗಾಂಜಾ ತಂದು ಮಂಗಳೂರು, ಉಡುಪಿ, ಕಾಸರಗೋಡಿನ ಹಲವೆಡೆ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಪೊಲೀಸರು ಮಂಗಳೂರು ಹೊರವಲಯದ ಮುಡಿಪಿನ ಕುರ್ನಾಡು ಗ್ರಾಮದಲ್ಲಿ ಈ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ 132 ಕೆ.ಜಿ ಗಾಂಜಾ, ಶಸ್ತ್ರಾಸ್ತ್ರ ಸೇರಿದಂತೆ ಒಟ್ಟು 39ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನ ವಶಪಡಿಸಿಕೊಳ್ಳಲಾಗಿದೆ. ಈ ಹಿಂದೆ ಈ ಇಬ್ಬರಾದ ರಮೀಜ್ ವಿರುದ್ಧ 6 ಪ್ರಕರಣ, ಅಬ್ದುಲ್ ಖಾದರ್ ಮೇಲೆ ಮೂರು ಪ್ರಕರಣ ದಾಖಲಾಗಿದ್ದವು ಎಂದು ಪೊಲೀಸ್​ ತನಿಖೆಯಲ್ಲಿ ಬಹಿರಂಗವಾಗಿದೆ. ಆರೋಪಿಗಳ ಜೊತೆ ಮತ್ತಷ್ಟು ಗಾಂಜಾ ಮಾರಾಟಗಾರರು ಸೇರಿರುವ ಸಾಧ್ಯತೆ ಇದೆ ಎನ್ನಲಾಗಿದೆ.

Exit mobile version