Site icon PowerTV

ಸರ್ಕಾರದ ವಿರುದ್ಧ ಮುಂದುವರಿದ ರೈತರ ರೋಷಾಗ್ನಿ

ಬಾಗಲಕೋಟೆ : ಕಬ್ಬಿಗೆ ವೈಜ್ಞಾನಿಕ ದರ ನಿಗದಿ ಮಾಡುವಂತೆ ಆಗ್ರಹಿಸಿ ರೈತರ ರೋಷಾಗ್ನಿ ಮುಂದುವರಿದಿದೆ. ಸರ್ಕಾರ ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ತಟಸ್ಥ ನೀತಿಗೆ ಬಾಗಲಕೋಟೆ ಜಿಲ್ಲೆಯ ಮುಧೋಳ ರೈತರು ನಡೆಸುತ್ತಿರುವ ಹೋರಾಟ 50ನೇ ದಿನಕ್ಕೆ ಕಾಲಿಟ್ಟಿದೆ. ಆದ್ರೂ ಕಾರ್ಖಾನೆ ಮಾಲೀಕರು ಮಾತ್ರ ರೈತರ ಬೇಡಿಕೆಗೆ ಸ್ಪಂದಿಸುತ್ತಿಲ್ಲ. ಹೀಗಾಗಿ ನಗರದ ರಾಯಣ್ಣ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ರೈತರು ಪ್ರತಿಭಟನಾ ಮೆರವಣಿಗೆ ನಡೆಸಿದ್ರು. ಈ ವೇಳೆ ಪೊಲೀಸರು, ರೈತರ ಮಧ್ಯೆ ಹೈಡ್ರಾಮಾನೇ ನಡೆಯಿತು.

50 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ರೂ, ಜಿಲ್ಲೆಯ ಸಚಿವರಾದ ಗೋವಿಂದ ಕಾರಜೋಳ ಹಾಗೂ ಮುರುಗೇಶ್ ನಿರಾಣಿ ಸುಮ್ಮನೆ ಕೂತಿದ್ದಾರೆಂದು ಆಕ್ರೋಶ ಹೊರಹಾಕಿದ್ರು.

ಒಟ್ಟಿನಲ್ಲಿ ಅನ್ನದಾತರು ಕಬ್ಬಿಗೆ ಸೂಕ್ತ ಬೆಲೆ ನಿಗದಿ ಮಾಡಿ ಬೀದಿಗಿಳಿದು ಪ್ರತಿಭಟಿಸುತ್ತಿದ್ರೂ, ಸರ್ಕಾರ ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರು ತಟಸ್ಥ ನೀತಿ ಅನುಸರಿಸ್ತಿದ್ದಾರೆ.

ನಿಜಗುಣ ಮಠಪತಿ,ಪವರ್ ಟಿವಿ ಬಾಗಲಕೋಟೆ.

Exit mobile version