Site icon PowerTV

ಮಾಜಿ ಸಚಿವ, ಶಾಸಕ ತನ್ವೀರ್ ಸೇಠ್​’ಗೆ ಕೊಲೆ ಬೆದರಿಕೆ; ದೂರು ದಾಖಲು

ಮೈಸೂರು: ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರಿಗೆ ಜೀವ ಬೆದರಿಕೆ ಹಾಕಿದ ಹಿನ್ನಲೆಯಲ್ಲಿ ಇಂದು ಪೊಲೀಸ್ ದೂರು ದಾಖಲಿಸಿದ್ದಾರೆ.

ಇತ್ತೀಚಿಗೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರು ಟಿಪ್ಪು ಸುಲ್ತಾನ್‌ ದೇಶದ ಅತಿ ಎತ್ತರದ ಪ್ರತಿಮೆ ಸ್ಥಾಪಿಸುವುದಾಗಿ ಘೋಷಿಸಿದ್ದಕ್ಕಾಗಿ ಜೀವ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಪೊಲೀಸ್ ದೂರು ದಾಖಲಿಸಿದ್ದಾರೆ.

ಮೈಸೂರಿನಲ್ಲಿ ಒಟ್ಟು ಮೂರು ಕಡೆ ದೂರು ದಾಖಲಿಸಲಾಗಿದೆ. ಮೈಸೂರಿನ ಉದಯಗಿರಿ ಮತ್ತು ಮಂಡಿ ಪೊಲೀಸ್ ಠಾಣೆ ಹಾಗೂ ಮೈಸೂರು ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಅವರಿಗೆ ಕಾಂಗ್ರೆಸ್ ಬ್ಲಾಕ್ ಸಮಿತಿಯಿಂದ ದೂರು ನೀಡಲಾಗಿದೆ.

 

 

Exit mobile version