Sunday, August 24, 2025
Google search engine
HomeUncategorizedಸಾರಿಗೆ ಇಲಾಖೆ ವಿರುದ್ಧ ವಿದ್ಯಾರ್ಥಿಗಳು ಪ್ರೊಟೆಸ್ಟ್

ಸಾರಿಗೆ ಇಲಾಖೆ ವಿರುದ್ಧ ವಿದ್ಯಾರ್ಥಿಗಳು ಪ್ರೊಟೆಸ್ಟ್

ವಿಜಯನಗರ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್​ಗಳು​ ಸರಿಯಾದ ಸಮಯಕ್ಕೆ ತಲುಪುವುದಿಲ್ಲ ಎಂದು ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದದಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಗ್ರಾಮೀಣ ಭಾಗಗಳಿಂದ ವಿದ್ಯಾಭ್ಯಾಸಕ್ಕಾಗಿ ತೆರಳುವ ವಿದ್ಯಾರ್ಥಿಗಳಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಸಂಪರ್ಕ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಸಾರಿಗೆ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೂಡ್ಲಿಗಿಯ ಬಸ್ ನಿಲ್ದಾಣದ ಬಳಿ ವಿದ್ಯಾರ್ಥಿಗಳು ಬಸ್​ಗಳನ್ನು ತಡೆದು ರಸ್ತೆಯಲ್ಲಿ ಧರಣಿ ಕುಳಿತರು. ಸಾರಿಗೆ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಕೂಡ್ಲಿಗಿ, ಕೊಟ್ಟೂರು, ಹರಪನಹಳ್ಳಿ ಮಾರ್ಗ ಸೇರಿದಂತೆ, ತಾಲೂಕಿನ ಗ್ರಾಮೀಣ ಭಾಗಗಳಿಗೆ ವಿದ್ಯಾರ್ಥಿಗಳಿಗೆ ಅನುಕೂಲವಾಗೋ ಸಮಯಕ್ಕೆ ಬಸ್ ಸೌಲಭ್ಯ ಕಲ್ಪಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದರು.​​

RELATED ARTICLES
- Advertisment -
Google search engine

Most Popular

Recent Comments