Site icon PowerTV

ರೈತನ ಮೇಲೆ ದಾಳಿ ಮಾಡಿದ್ದ ಚಿರತೆ ಮತ್ತೆ ಪ್ರತ್ಯಕ್ಷ

ಕೊಪ್ಪಳ: ಕಳೆದ ಎರಡು ದಿನಗಳ ಹಿಂದೆ ರೈತನ ಮೇಲೆ ದಾಳಿ ಮಾಡಿದ್ದ ಚಿರತೆ ಮತ್ತೆ ಪ್ರತ್ಯಕ್ಷವಾಗಿದ್ದು, ಚಿರತೆ ಕಂಡು ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಕೊಪ್ಪಳ ತಾಲೂಕಿನ ಹಿರೇಬಗನಾಳ-ಹಾಲವರ್ತಿ ಗ್ರಾಮದ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು, ಮರವೇರಿ ಕುಳಿತ ಚಿರತೆ ಕಂಡು ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಕೊಪ್ಪಳ ಜಿಲ್ಲಾ ಕೇಂದ್ರದಿಂದ ಐದು ಕಿಲೋಮೀಟರ್ ಅಂತರದಲ್ಲಿ ಇರೋ ಗ್ರಾಮಗಳು, ಚಿರತೆ ವಿಡಿಯೋ ಶೇರ್ ಮಾಡಿ ಗ್ರಾಮಕ್ಕೆ ಯಾರು ಬರಬೇಡಿ ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

Exit mobile version