Site icon PowerTV

ಕೌಟುಂಬಿಕ ಕಲಹದಿಂದ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಬೆಳಗಾವಿ; ಕೌಟುಂಬಿಕ ಕಲಹ‌, ಜೀವನದಲ್ಲಿ ಜಿಗುಪ್ಸೆ ಹೊಂದಿ ನವಿಲು ತೀರ್ಥ ಜಲಾಶಯದಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಹೀಡಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನಲ ವಟ್ನಾಳ ಗ್ರಾಮ ಹೊರವಲಯದಲ್ಲಿರುವ ನವಿಲುತೀರ್ಥ ಜಲಾಶಯ, ಕೌಟುಂಬಿಕ ಕಲಹ‌, ಜೀವನದಲ್ಲಿ ಜಿಗುಪ್ಸೆಗೊಂಡ ತಾಯಿಯೋರ್ವಳು ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ರಾಮದುರ್ಗ ತಾಲೂಕಿನ ಕಂಚನೂರ ಗ್ರಾಮದ ಶಶಿಕಲಾ ಪರಸಪ್ಪ ಗೋಡಿ(32), ಸುದೀಪ್ (4) ರಾಧಿಕಾ(3) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಜಿಗುಪ್ಸೆ ಹೊಂದಿ ನವಿಲು ತೀರ್ಥ ಜಲಾಶಯದ ಹಿನ್ನೀರಿನಲ್ಲಿ ಎರಡು ಮಕ್ಕಳನ್ನು ನೀರಲ್ಲಿ ಮುಳುಗಿಸಿ ಸಾಯಿಸಿ ತಾನು ಸಹ ನೀರಲ್ಲಿ ಮುಳುಗಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಬಗ್ಗೆ ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version