Monday, August 25, 2025
Google search engine
HomeUncategorizedತುಮಕೂರಲ್ಲಿ SC/ST ಜಾಗೃತ ಸಮಾವೇಶ

ತುಮಕೂರಲ್ಲಿ SC/ST ಜಾಗೃತ ಸಮಾವೇಶ

ತುಮಕೂರು : ಕಲ್ಪತರು ನಾಡು ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಜಾಗೃತ ಸಮಾವೇಶವನ್ನು ಆಯೋಜಿಸಲಾಗಿತ್ತು.

ತಿಪಟೂರು ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಸಮಾಜ ಸೇವಕ ಕೆ.ಟಿ.ಶಾಂತಕುಮಾರ್ ನೇತೃತ್ವದಲ್ಲಿ ಜಾಗೃತ ಸಮಾವೇಶವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ನಿಷ್ಕಲ ಮಂಟಪ ಬೈಲೂರು ಮಠದ ಶ್ರೀ ನಿಜಗುಣಾನಂದ ಸ್ವಾಮೀಜಿ, ಮೈಸೂರಿನ ಉರಿಲಿಂಗ ಪೆದ್ದಿ ಪೀಠಾಧ್ಯಕ್ಷರಾದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿಗಳು ಚಾಲನೆ ನೀಡಿದರು.

ಇದಕ್ಕೂ ಮುಂಚಿತವಾಗಿ ವಿವಿಧ ಕಲಾತಂಡಗಳ ಜೊತೆ ತಿಪಟೂರಿನ ಕೆಂಪಮ್ಮ ದೇವಿ ದೇವಾಲಯದಿಂದ ಬಿ.ಹೆಚ್ ರಸ್ತೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವ ಚಿತ್ರದ ಮೆರವಣಿಗೆ ಮಾಡಲಾಯಿತು, ನೂರಾರು ಸಂಖ್ಯೆಯಲ್ಲಿ ಜನರು ಜಾಗೃತಿ ಸಮಾವೇಶದಲ್ಲಿ ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular

Recent Comments