Sunday, August 24, 2025
Google search engine
HomeUncategorizedನಟಿ ತಬಸ್ಸುಮ್​​​​​ ನಿಧನ

ನಟಿ ತಬಸ್ಸುಮ್​​​​​ ನಿಧನ

ಹಿರಿಯ ನಟಿ ತಬಸ್ಸುಮ್ 78 ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಬಾಲ ಕಲಾವಿದೆಯಾಗಿ ಮತ್ತು ಜನಪ್ರಿಯ ದೂರದರ್ಶನ ಟಾಕ್ ಶೋ ನಿರೂಪಕಿಯಾಗಿ ಹೆಸರುವಾಸಿಯಾಗಿದ್ದ ತಬಸ್ಸುಮ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಅವರ ಪುತ್ರ ಹೋಶಾಂಗ್ ಗೋವಿಲ್ ತಿಳಿಸಿದ್ದಾರೆ.

ಕೆಲ ದಿನಗಳ ಹಿಂದೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಗ್ಯಾಸ್ಟ್ರೋ ಸಮಸ್ಯೆಯಿಂದ ತಪಾಸಣೆಗಾಗಿ ಆಸ್ಪತ್ರೆಗೆ ಹೋದಾಗ ಶುಕ್ರವಾರ ರಾತ್ರಿ 8:40 ಮತ್ತು 8:42ಕ್ಕೆ ಎರಡು ಬಾರಿ ಹೃದಯಾಘಾತದ ನಂತರ ಅವರು ಸಾವನ್ನಪ್ಪಿದ್ದಾಗಿ ಹೋಶಾಂಗ್ ಮಾಹಿತಿ ನೀಡಿದ್ದಾರೆ.

1947 ರಲ್ಲಿ ಬಾಲನಟಿಯಾಗಿ ತನ್ನ ವೃತ್ತಿಜೀವನ ಪ್ರಾರಂಭಿಸಿದ ತಬಸ್ಸುಮ್ ಬಾಲ ಕಲಾವಿದೆಯಾಗಿ ಬೇಬಿ ತಬಸ್ಸುಮ್ ಎಂದೇ ಖ್ಯಾತರಾಗಿದ್ದರು. 1940ರ ದಶಕದ ಉತ್ತರಾರ್ಧದಲ್ಲಿ ನರ್ಗೀಸ್, ಮೇರಾ ಸುಹಾಗ್, ಮಂಜಧರ್ ಮತ್ತು ಬರಿ ಬೆಹೆನ್‌ನಂತಹ ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ದೂರದರ್ಶನದಲ್ಲಿ 1972 ರಿಂದ 1993 ರವರೆಗೆ ಫೂಲ್ ಖಿಲೆ ಹೈ ಗುಲ್ಶನ್ ಗುಲ್ಶನ್ ಎಂಬ ಪ್ರಸಿದ್ಧ ಟಾಕ್ ಶೋ ನಿರೂಪಕಿಯಾಗಿಯೂ ಹೆಸರು ಮಾಡಿದ್ದರು.

RELATED ARTICLES
- Advertisment -
Google search engine

Most Popular

Recent Comments