Site icon PowerTV

ಎಸ್‌ಟಿ ಸಮುದಾಯದ ಕೂಗು ಕೇಳಿಸಿಕೊಂಡಿದ್ದು ಬಿಜೆಪಿ : ಸಿ.ಟಿ.ರವಿ

ಬಳ್ಳಾರಿ : ಎಸ್‌ಟಿ ಸಮುದಾಯದ ಕೂಗು ಕೇಳಿಸಿಕೊಂಡಿದ್ದು ಬಿಜೆಪಿ ಮಾತ್ರ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.

ಬಳ್ಳಾರಿ ನಗರದಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಎಸ್ಟಿ ಸಮಾವೇಶದಲ್ಲಿ ಮಾತನಾಡಿದ ಸಿ. ಟಿ. ರವಿ, ಈ ಸಮಾವೇಶದಲ್ಲಿ ಜನರು ಪ್ರೀತಿ, ವಿಶ್ವಾಸದಿಂದ ಭಾಗವಹಿಸಿದ್ದಾರೆ ಎಂದರು. ಯಾವ ಸರ್ಕಾರಗಳೂ ಸಮುದಾಯದ ಕೂಗು ಕೇಳಿಸಿಕೊಳ್ಳದೇ ಮೀಸಲಾತಿಯನ್ನು ಹೆಚ್ಚಿಸಲಿಲ್ಲ. ಆದರೆ ಆ ಕೆಲಸ ಮಾಡಿದ್ದು ಬಿಜೆಪಿ ಮಾತ್ರ. ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದರೆ ಕಾಂಗ್ರೆಸ್‌ನವರು ವಿರೋಧಿಸುತ್ತಾರೆ.

ಇನ್ನು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಈ ಕಾಯ್ದೆ ವಾಪಸ್ ಪಡೆಯುತ್ತೇವೆ ಎಂದು ಹೇಳುತ್ತಾರೆ. ಶಿವನ ಆವಾಸ ಸ್ಥಾನವಾದ ಕಪಾಲಿ ಬೆಟ್ಟವನ್ನು ಕೆಪಿಸಿಸಿ ಅಧ್ಯಕ್ಷರು ಮತಾಂತರ ಮಾಡಲು ಹೊರಟಿದ್ದರು‌. ಇದರ ಪರಿಣಾಮ ಅವರಿಗೆ ಉನ್ನತ ಹುದ್ದೆ ಸಿಕ್ಕಿತು. ಕಾಂಗ್ರೆಸ್‌ನವರಿಗೆ ಕುಂಕುಮ ಕಂಡರೆ ಆಗಲ್ಲ. ಕೇಸರಿ ಕಂಡರೆ ಆಗಲ್ಲ. ಅಂತವರಿಗೆ ಮತ ಹಾಕಬೇಡಿ ಎಂದು ವಾಗ್ದಾಳಿ ನಡೆಸಿದ್ದಾರೆ.

Exit mobile version