Site icon PowerTV

ಕಾಂಗ್ರೆಸ್‌ ಸರ್ವನಾಶವಾಗುವುದರಲ್ಲಿ ಯಾವುದೇ ಅನುಮಾನ ಇಲ್ಲ : ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ : ಡಿ.ಕೆ. ಶಿವಕುಮಾರ್ ಗೆ ಮಾನ, ಮರ್ಯಾದೆ ಇದ್ದರೆ ಸಿದ್ದರಾಮಯ್ಯ ವಿರುದ್ಧ ಶಿಸ್ತು ಕ್ರಮ ಜರುಗಿಸಲಿ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದರ ಹಿಂದೆ ಎಷ್ಟೇ ಪ್ರಭಾವಿಗಳಿದ್ದರೂ, ಯಾವ ಪಕ್ಷದವರೇ ಆಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಆಗಬೇಕು. ಈ ಬಗ್ಗೆ ಸಮಗ್ರ ತನಿಖೆ ಆಗಬೇಕು. ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗ ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಅಶ್ವಥ್ ನಾರಾಯಣ್ ಸೇರಿದಂತೆ ಯಾರ ಪಾತ್ರ ಇದೆಯೋ, ಇಲ್ಲವೋ ತನಿಖೆಯಿಂದ ಹೊರಬರಲಿ ಎಂದರು.

ಇನ್ನು, ಪ್ರಜಾಪ್ರಭುತ್ವದ ಬಗ್ಗೆ ಜನರ ನಂಬಿಕೆ ಹೆಚ್ಚಾಗಲಿ. ಕೊಪ್ಪಳದಲ್ಲಿ ಸಿದ್ದರಾಮಯ್ಯರಿಂದ 5 ಜನ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗಿದೆ. ಡಿ.ಕೆ. ಶಿವಕುಮಾರ್ ಗೆ ಮಾನ, ಮರ್ಯಾದೆ ಇದ್ದರೆ ಸಿದ್ದರಾಮಯ್ಯ ವಿರುದ್ಧ ಶಿಸ್ತು ಕ್ರಮ ಜರುಗಿಸಲಿ. ಸಿದ್ದರಾಮಯ್ಯಗೆ ಹೀಗೆ ಹೇಳಲು ಅಧಿಕಾರ ನೀಡಿದವರು ಯಾರು ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಜೊತೆ ಎಂ.ಬಿ. ಪಾಟೀಲ್ ಸಹ ಹೀಗೆ ಮಾತನಾಡುತ್ತಿದ್ದಾರೆ. ಅರ್ಜಿ ಸಲ್ಲಿಕೆ ಅವಧಿ ಮುಗಿಯುವ ಮೊದಲೇ ಹೀಗೆ ಆದರೆ ಹೇಗೆ….? ಇದೇ ರೀತಿ ಆದರೆ 224 ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನೂ ಘೋಷಿಸಿ ಬಿಡಿ. ಅವರ ಬೆಂಬಲಿಗರಿಗೂ ಸಂತಸವಾಗುತ್ತದೆ. ಹೀಗೆ ಆದರೆ ಕಾಂಗ್ರೆಸ್‌ ಸರ್ವನಾಶವಾಗುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದರು.

Exit mobile version