Site icon PowerTV

ವಿದ್ಯಾರ್ಥಿನಿಯರ ಅರೆನಗ್ನ ವಿಡಿಯೋ ಮಾಡುತ್ತಿದ್ದವ ಅರೆಸ್ಟ್​

ಬೆಂಗಳೂರು : ವಿದ್ಯಾರ್ಥಿನಿಯರ ಅರೆನಗ್ನ ವಿಡಿಯೋ ಮಾಡುತ್ತಿದ್ದ ಪಾಪಿ ಕೊನೆಗೂ ಅರೆಸ್ಟ್ ಆಗಿದ್ದಾನೆ.

ಹೊಸಕೆರೆಹಳ್ಳಿಯ ಖಾಸಗಿ ಕಾಲೇಜಿನಲ್ಲಿ ಐದನೇ ಸೆಮಿಸ್ಟರ್ ಬಿಬಿಎ ವ್ಯಾಸಂಗ ಮಾಡುತ್ತಿದ್ದ ಶುಭಂ.ಎಂ.ಆಜಾದ್ ಎಂಬ ವಿದ್ಯಾರ್ಥಿಯೂ ವಿದ್ಯಾರ್ಥಿನಿಯರ ವಿಡಿಯೋ ಮಾಡ್ತಿದ್ದ. ಶೌಚಾಲಯದಲ್ಲಿ ರಹಸ್ಯ ಕ್ಯಾಮರಾ ಫಿಕ್ಸ್ ಮಾಡಿ 1,200 ಕ್ಕೂ ಅಧಿಕ ವಿಡಿಯೋ ಹಾಗೂ ಫೋಟೋವನ್ನು ಚಿತ್ರೀಕರಿಸಿದ್ದ.

ಇತ್ತೀಚೆಗೆ ಕಾಲೇಜು ಶೌಚಾಲಯದಲ್ಲಿ ಕ್ಯಾಮರಾ ಅಳವಡಿಸಲು ಹೋದಾಗ ಯುವತಿಯರು ಶುಭಂ ಅನ್ನು ನೋಡುತ್ತಾರೆ, ಇದರಿಂದ ಭಯಗೊಂಡ ಶುಭಂ ತಕ್ಷಣ ಅಲ್ಲಿಂದ ಎಸ್ಕೇಪ್​ ಆಗುತ್ತಾನೆ. ಸಿಸಿಟಿವಿ ಕ್ಯಾಮರಾ ಪರಿಶೀಲನೆ ವೇಳೆ ಶುಭಂ ಕೃತ್ಯ ಬೆಳಕಿಗೆ ಬಂದಿದೆ, ಸದ್ಯ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Exit mobile version