Site icon PowerTV

ಕಾಂಗ್ರೆಸ್ ವಿಸರ್ಜಿಸುವ ಸಮಯ ಬಂದಿದೆ : ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶ : ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅನ್ನು ವಿಸರ್ಜಿಸುವ ಮಹಾತ್ಮ ಗಾಂಧಿಯವರ ಕನಸನ್ನು ನನಸಾಗಿಸುವ ಸಮಯ ಬಂದಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಗುಜರಾತ್‌ನಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಕೊರೊನ ಸಾಂಕ್ರಾಮಿಕ ಸಮಯದಲ್ಲಿ ಚಿಕಿತ್ಸೆ ಮತ್ತು ಲಸಿಕೆಗಾಗಿ ಮೀಸಲಾದ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿತ್ತು. ಬಿಕ್ಕಟ್ಟಿನ ಸಂದರ್ಭದಲ್ಲಿ ಕಾಂಗ್ರೆಸ್ ಎಂದಿಗೂ ಜನರೊಂದಿಗೆ ನಿಲ್ಲುವುದಿಲ್ಲ ಎಂದು ಹೇಳಿದರು.

ಭಾರತಕ್ಕೆ ಸ್ವಾತಂತ್ರ‍್ಯ ಬಂದ ನಂತರ ಕಾಂಗ್ರೆಸ್ ಪಕ್ಷವನ್ನು ವಿಸರ್ಜಿಸಬೇಕೆಂದು ಗಾಂಧಿ ಸೂಚಿಸಿದ್ದರು. ಅಧಿಕಾರದ ಲಾಲಸೆಗೆ ಅದನ್ನು ಮುಂದುವರಿಸಲಾಯಿತು. ಆದರೆ ಕಾಂಗ್ರೆಸ್ ಎಂದೂ ಜನಪರ ಕೆಲಸ ಮಾಡಲಿಲ್ಲ. ಕಾಂಗ್ರೆಸ್‌ಗಿಂತ ಭಿನ್ನವಾಗಿ ಬಿಜೆಪಿ ಯಾವಾಗಲೂ ತನ್ನ ಭರವಸೆಗಳನ್ನು ಈಡೇರಿಸುತ್ತ ಬಂದಿದೆ ಎಂದರು. ಹೀಗಾಗಿ ಬಾಪು ಅವರ ಕಾಂಗ್ರೆಸ್ ಅನ್ನು ವಿಸರ್ಜಿಸುವ ಕನಸು ನನಸಾಗುವ ಸಮಯ ಬಂದಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

Exit mobile version