Site icon PowerTV

ರಾಮನಗರದಲ್ಲಿ ಕಾಡಾನೆ ಪ್ರತ್ಯಕ್ಷ

ರಾಮನಗರ : ಇತ್ತೀಚಿಗೆ ಮಲೆನಾಡು ಭಾಗಗಳಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗ್ತಾನೆ ಇದೆ. ರಾಮನಗರದ ರಾಯರದೊಡ್ಡಿ ನಗರದ ಬಳಿ ಬೆಳ್ಳಂಬೆಳಗ್ಗೆ ಕಾಡಾನೆ ಪ್ರತ್ಯಕ್ಷವಾಗಿದೆ.

ಬೋಳಪ್ಪನ ಕೆರೆಯಲ್ಲಿ ಆನೆಗಳು ಬೀಡು ಬಿಟ್ಟಿದ್ದು , ಒಂಟಿ ಆನೆ ಕಾಣಿಸಿಕೊಂಡಿದೆ. ಕಾಡಾನೆಗಳ ಹಿಂಡು ಕಂಡು ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದು, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಆದರೆ ಯಾವೊಬ್ಬ ಅಧಿಕಾರಿ ಕೂಡ ಸ್ಪಂದಿಸಿಲ್ಲ. ಗ್ರಾಮದ ಜನರಲ್ಲಿ ಆತಂಕ ಹೆಚ್ಚಾಗಿದ್ದು, ಜನರು ಮನೆಯಿಂದ ಹೊರ ಬರಲು ಕೂಡ ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸೂಕ್ತ ಕ್ರಮಕ್ಕೆ ಮುಂದಾಗದ ಅಧಿಕಾರಿಗಳ ವಿರುದ್ದ ಗ್ರಾಮಸ್ಥರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

Exit mobile version