Thursday, September 11, 2025
HomeUncategorized5.86 ಲಕ್ಷ ವಿಶೇಷಚೇತನರಿಗೆ UDID ವಿತರಣೆ

5.86 ಲಕ್ಷ ವಿಶೇಷಚೇತನರಿಗೆ UDID ವಿತರಣೆ

ಬೆಂಗಳೂರು : ಸರ್ಕಾರದಿಂದ ವಿಶೇಷಚೇತನರಿಗೆ ನೀಡುವ ವಿಶಿಷ್ಟ ಗುರುತಿನ ಚೀಟಿ ವಿತರಣೆಯಲ್ಲಿ ರಾಜ್ಯದಲ್ಲಿ ಗಮನಾರ್ಹ ಸಾಧನೆಯಾಗಿದೆ. ಈವರೆಗೆ 5.86 ಲಕ್ಷ ವಿಶೇಷಚೇತನರಿಗೆ ಕಾರ್ಡ್‌ ವಿತರಣೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ಬೆಂಗಳೂರಿನಲ್ಲಿ ಯುಡಿಐಡಿ ಕಾರ್ಡ್‌ ವಿತರಣೆ ಪ್ರಕ್ರಿಯೆಯ ಪ್ರಗತಿ ಪರಿಶೀಲಿಸಿ ಅವರು ಮಾತನಾಡಿದರು. ವಿಕಲಚೇತನರ ಸಬಲೀಕರಣ ಇಲಾಖೆಯ ಸಹಯೋಗದೊಂದಿಗೆ, ವಿಶೇಷಚೇತನರಿಗೆ ನೀಡುವ ಯುನಿವರ್ಸಲ್ ಗುರುತು ಚೀಟಿ–ಯುಡಿಐಡಿಯಲ್ಲಿ ಕರ್ನಾಟಕ ಉತ್ತಮ ಸಾಧನೆ ತೋರಿದೆ. ರಾಮನಗರ ಜಿಲ್ಲೆಯಲ್ಲಿ ಅತಿ ಹೆಚ್ಚು ಕಾರ್ಡ್‌ಗಳು ವಿತರಣೆಯಾಗಿವೆ.

ಚಿಕ್ಕಮಗಳೂರು ಎರಡನೇ ಸ್ಥಾನದಲ್ಲಿದ್ದು, ಬಾಗಲಕೋಟೆ, ಹಾವೇರಿ, ಉತ್ತರ ಕನ್ನಡ, ಬೆಳಗಾವಿ ಹಾಗೂ ಮಂಡ್ಯ ಜಿಲ್ಲೆಗಳು ನಂತರದ ಸ್ಥಾನಗಳಲ್ಲಿವೆ ಎಂದು ಸಚಿವರು ತಿಳಿಸಿದರು. ಜೊತೆಗೆ ಉತ್ತಮ ಸಾಧನೆ ಮಾಡಿದ ಜಿಲ್ಲೆಗಳ ಆರೋಗ್ಯಾಧಿಕಾರಿಗಳನ್ನು ಅಭಿನಂದಿಸಿದರು.

RELATED ARTICLES
- Advertisment -
Google search engine

Most Popular

Recent Comments