Sunday, September 7, 2025
HomeUncategorizedಮಂಗಳೂರು ಸ್ಫೋಟ ಬೆನ್ನಲ್ಲೇ ಮತ್ತೆ ಧರ್ಮ ದಂಗಲ್ ಸದ್ದು​..!

ಮಂಗಳೂರು ಸ್ಫೋಟ ಬೆನ್ನಲ್ಲೇ ಮತ್ತೆ ಧರ್ಮ ದಂಗಲ್ ಸದ್ದು​..!

ಮಂಗಳೂರು : ಶಾಂತವಾಗಿದ್ದ ಕರಾವಳಿಯಲ್ಲಿ ಮತ್ತೆ ಧರ್ಮ ದಂಗಲ್ ಸದ್ದು​ಮಾಡುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅನ್ಯಧರ್ಮಿಯರಿಗೆ ವ್ಯಾಪಾರ ನಿಷೇಧಿಸಲಾಗಿದೆ.

ಇನ್ನು, ಕುಕ್ಕೆ ಸುಬ್ರಹ್ಮಣ್ಯದಲ್ಲಿ 15 ದಿನ ನಡೆಯುವ ವಾರ್ಷಿಕ ಷಷ್ಠಿ ಉತ್ಸವದಲ್ಲಿ ಅನ್ಯಧರ್ಮಿಯರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲವೆಂದು ಬ್ಯಾನರ್ ಹಾಕಿದ್ದಾರೆ. ಹಿಂದೂ ಜಾಗರಣ ವೇದಿಕೆ ಸುಬ್ರಹ್ಮಣ್ಯ ಘಟಕದ ಹೆಸರಲ್ಲಿ ಬ್ಯಾನರ್ ಹಾಕಿದ್ದಾರೆ.

ಇನ್ನು, ಪ್ರತಿ ವರ್ಷ ನಡೆಯುವ ಕುಕ್ಕೆ ಸುಬ್ರಹ್ಮಣ್ಯದ ಜಾತ್ರಾ ಮಹೋತ್ಸವ ಚಂಪಾ ಷಷ್ಠಿ ಸಂದರ್ಭದಲ್ಲಿ ತಾತ್ಕಾಲಿಕ ವ್ಯಾಪಾರ ಮಳಿಗೆಗಳಿಗೆ ಅವಕಾಶ ನೀಡಲಾಗಿದ್ದು, ಪ್ರತಿ ವರ್ಷ ಹಿಂದೂ-ಮುಸ್ಲಿಂ ಸೇರಿದಂತೆ ಎಲ್ಲಾ ಧರ್ಮದವರಿಗೂ ಅನುಮತಿ ನೀಡಲಾಗಿತ್ತು, ಆದರೆ ಈ ಬಾರಿ ಅನ್ಯ ಧರ್ಮದ ವ್ಯಾಪಾರಿಗಳಿಗೆ ನಿರ್ಬಂಧ ಹೇರಲಾಗಿದ್ದು, ಧರ್ಮ ದಂಗಲ್​ ಬಗ್ಗೆ ಪರ-ವಿರೋಧ ಚರ್ಚೆ ಆರಂಭಗೊಂಡಿದೆ.

RELATED ARTICLES
- Advertisment -
Google search engine

Most Popular

Recent Comments