Site icon PowerTV

ಕಾಂಗ್ರೆಸ್ ಒಲೈಕೆಯಿಂದ ಭಯೋತ್ಪಾದಕ ಚಟುವಟಿಕೆ ಬೆಳೆದಿದೆ : ಪ್ರಮೋದ್ ಮುತಾಲಿಕ್

ಚಾಮರಾಜನಗರ : ಕಾಂಗ್ರೆಸ್ ನವರ ಮಾನಸಿಕತೆ ಹಾಗೂ ಓಲೈಕೆ ರಾಜಕಾರಣದಿಂದ ಗಲಭೆ, ಭಯೋತ್ಪಾದನೆ, ಗಲಾಟೆ ಆಗುತ್ತಿದೆ ಎಂದು ಶ್ರೀರಾಮಸೇನೆ ರಾಷ್ಟೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಿಂದಲೇ ಭಯೋತ್ಪಾದನೆ, ಗಲಭೆ- ಬೇಕಾದ್ರೆ ಸಾಬೀತು ಮಾಡ್ತೀನಿ. ಕಾಂಗ್ರೆಸ್ ನವರ ಮಾನಸಿಕತೆ ಹಾಗೂ ಓಲೈಕೆ ರಾಜಕಾರಣದಿಂದ ಗಲಭೆ, ಭಯೋತ್ಪಾದನೆ, ಗಲಾಟೆ ಆಗುತ್ತಿದೆ. ಕಾಂಗ್ರೆಸ್ ಒಲೈಕೆಯಿಂದ ಭಯೋತ್ಪಾದಕ ಚಟುವಟಿಕೆ ಬೆಳೆದಿದೆ ಬೇಕಾದ್ರೆ ದಾಖಲೆ ಸಮೇತ ಸಾಬೀತು ಪಡಿಸುತ್ತೇನೆ ಎಂದರು.

ಇನ್ನು, ದೇಶದ್ರೋಹಿ ಚಟುವಟಿಕೆಗೆ ಮೈಸೂರು ಪ್ರಯೋಗಶಾಲೆಯಾಗಿ ಬದಲಾಗಿದೆ. PFI ನಿಷೇಧಕ್ಕೊಳಗಾದರೂ ಪಿಎಫ್ಐ ಮಾನಸಿಕ ಸ್ಥಿತಿಯ ಸಾವಿರಾರು ಮಂದಿ ಇನ್ನೂ ಇದ್ದಾರೆ. ಚಂಪಷಷ್ಟಿ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ದೇವಾಲಯದಲ್ಲ. ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ಕೊಡದಿರುವ ನಿರ್ಧಾರ ಸ್ವಾಗತಾರ್ಹ. ಈ ದೇಶದಲ್ಲಿದ್ದುಕೊಂಡು, ಇಲ್ಲಿನ ಸವಲತ್ತು ಪಡೆದುಕೊಂಡು ದೇಶದ್ರೋಹಿ ಚಟುವಟಿಕೆ ನಡೆಸುವ ಕಿಡಿಗೇಡಿಗಳು. ಭಯೋತ್ಪಾದಕರಿಂದ ಈ ನಿರ್ಬಂಧ ಎಂಬುದನ್ನು ಮೌಲ್ವಿಗಳು, ಮುಲ್ಲಾಗಳು ಅರಿಯಬೇಕು‌ ಎಂದು ಹೇಳಿದರು.

ಅದಲ್ಲದೇ, ಹಿಂದುತ್ವಕ್ಕಾಗಿ, ಹಿಂದೂಗಳ ಕಷ್ಟ ಆಲಿಸಲು, ಹಿಂದೂವಿನ ಧ್ವನಿಯನ್ನು ವಿಧಾನಸಭೆಯಲ್ಲಿ ಮೊಳಗಿಸಲು ನಿರ್ಧಾರ ಮಾಡಲಾಗಿದೆ. 24 ಮಂದಿ ಪ್ರಮುಖ ಹಿಂದುತ್ವವಾದಿಗಳು ಚುನಾವಣೆಗೆ ನಿಲ್ಲಲ್ಲಿದ್ದು ಸ್ವತಂತ್ರವಾಗಿ ಸ್ಪರ್ಧಿಸುತ್ತೇವೆ. ಡಿಸೆಂಬರ್ 2 ಇಲ್ಲವೇ 3 ನೇ ವಾರ ಕ್ಷೇತ್ರ ಘೋಷಿಸುತ್ತೇನೆ ಎಂದರು.

Exit mobile version