Site icon PowerTV

ಕಾಂತಾರ ಚಿತ್ರಕ್ಕೆ ಗೋವಾ ಸಿಎಂ ಮೆಚ್ಚುಗೆ

ಕನ್ನಡದ `ಕಾಂತಾರ’ ಚಿತ್ರದ ಹವಾ ಇನ್ನೂ ಕಮ್ಮಿಯಾಗಿಲ್ಲ. ಗಡಿ ದಾಟಿ ಸದ್ದು ಮಾಡ್ತಿರುವ ರಿಷಬ್ ಚಿತ್ರಕ್ಕೆ ಗೋವಾ ಸಿಎಂ ಪ್ರಮೋದ್ ಸಾವಂತ್ ಮೆಚ್ಚುಗೆ ಸೂಚಿಸಿದ್ದಾರೆ.

ರಿಷಬ್ ಶೆಟ್ಟಿ ಅವರನ್ನು ಭೇಟಿಯಾಗಿ, ಚಿತ್ರದ ಬಗ್ಗೆ ಹಾಡಿ ಹೊಗಳಿದ್ದಾರೆ. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ `ಕಾಂತಾರ’ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. 400 ಕೋಟಿಗೂ ಮೀರಿ ಕಲೆಕ್ಷನ್ ಮಾಡಿರುವ ಕಾಂತಾರ ಒಟಿಟಿಯಲ್ಲೂ ಮೋಡಿ ಮಾಡ್ತಿದೆ. ಹೀಗಿರುವಾಗ `ಕಾಂತಾರ’ ಸಿನಿಮಾ ನೋಡಿ, ರಿಷಬ್ ಅವರನ್ನ ಗೋವಾ ಸಿಎಂ ಭೇಟಿಯಾಗಿದ್ದಾರೆ. ಗೋವಾದ ಪಣಜಿಯಲ್ಲಿ ನಟ, ಬರಹಗಾರ, ರಿಷಬ್ ಶೆಟ್ಟಿ ಆಗಿರುವುದಾಗಿ ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.

ಕಾಂತಾರ ಸಿನಿಮಾ ಜನಮನ್ನಣೆ ಗಳಿಸಿದೆ. ವಿವಿಧ ವಿಷಯಗಳ ಕುರಿತು ನಾವು ಚರ್ಚಿಸಿದ್ದೇವೆ. ರಿಷಬ್ ಶೆಟ್ಟಿ ಮುಂದಿನ ಕೆಲಸಗಳಿಗೆ ಗೋವಾ ಸರ್ಕಾರದ ಬೆಂಬಲ ಸದಾ ಇದ್ದೇ ಇದೆ ಎಂದು ಪ್ರಮೋದ್ ಸಾವಂತ್ ಬೆಂಬಲ ಸೂಚಿಸಿದ್ದಾರೆ. ಜೊತೆಗೆ ರಿಷಬ್ ಸಿನಿಮಾವನ್ನ ಮೆಚ್ಚಿ, ಬೆನ್ನು ತಟ್ಟಿದ್ದಾರೆ. ಇನ್ನೂ ಐವತ್ತು ದಿನಗಳನ್ನು ಪೂರೈಸಿ, ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಕಾಂತಾರ ಸಿನಿಮಾ ಈವರೆಗೂ 400 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಕರ್ನಾಟಕವೊಂದರಲ್ಲೇ 170 ಕೋಟಿಗೂ ಅಧಿಕ ಹಣ ಬಾಕ್ಸ್ ಆಫೀಸಿಗೆ ಹರಿದು ಬಂದಿದೆ ಎಂದು ಹೇಳಲಾಗುತ್ತಿದೆ. ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ವಿದೇಶದಿಂದ ಬಂದ ಹಣವನ್ನು ಒಟ್ಟಾಗಿಸಿದರೆ ಸಿನಿಮಾದ ಒಟ್ಟು ಗಳಿಕೆ 400 ಕೋಟಿ ರೂ. ಕಲೆಕ್ಷನ್ ಮಾಡಿದೆ.

Exit mobile version