Site icon PowerTV

ಶ್ರದ್ಧಾ ಕೊಲೆಗಾರನಿಗೆ ಕಠಿಣ ಶಿಕ್ಷೆ ಖಚಿತ : ಅಮಿತ್‌ ಶಾ

ನವದೆಹಲಿ : ಅಮಿತ್‌ ಶಾ ಶ್ರದ್ಧಾ ವಾಲ್ಕರ್‌ ಕೊಲೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ಖಚಿತ ಎಂದಿದ್ದಾರೆ ಕೇಂದ್ರ ಗೃಹ ಸಚಿವರು.

ದೆಹಲಿ ಪೊಲೀಸರು ಮತ್ತು ಪ್ರಾಸಿಕ್ಯೂಷನ್ ಶೀಘ್ರದಲ್ಲಿ ಕಠಿಣ ಶಿಕ್ಷೆ ಕೊಡಿಸಲಿವೆ ಎಂದು ಸಚಿವ ಅಮಿತ್ ಶಾ ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಇಡೀ ಪ್ರಕರಣದ ಮೇಲೆ ಕಣ್ಣಿರಿಸಿದ್ದೇನೆ. ಕಾನೂನು ಮತ್ತು ನ್ಯಾಯಾಲಯಗಳ ಮೂಲಕ, ದೆಹಲಿ ಪೊಲೀಸರು ಮತ್ತು ಪ್ರಾಸಿಕ್ಯೂಷನ್ ತ್ವರಿತಗತಿಯಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆ ಖಚಿತಪಡಿಸಲಿವೆ ಎನ್ನುವುದನ್ನು ದೇಶದ ಜನರಿಗೆ ಹೇಳಲು ಬಯಸುತ್ತೇನೆ’ ಎಂದರು. ದೆಹಲಿ ಮತ್ತು ಮುಂಬೈ ಪೊಲೀಸರ ನಡುವೆ ಈ ಪ್ರಕರಣದ ತನಿಖೆಯಲ್ಲಿ ಸಮನ್ವಯದ ಕೊರತೆ ಇಲ್ಲ ಎಂದು ಶಾ ಇದೇ ವೇಳೆ ಸ್ಪಷ್ಟಪಡಿಸಿದರು.

Exit mobile version