Site icon PowerTV

ಗಡಿ ಜಿಲ್ಲೆಗಳಲ್ಲಿ, ಯಾವುದೇ ಅಹಿತಕರ: ಆರಗ ಜ್ಞಾನೇಂದ್ರ

ಶಿವಮೊಗ್ಗ : ನೆರೆಯ ಮಹಾರಾಷ್ಟ್ರ ಗಡಿ ಭಾಗದ ಜಿಲ್ಲೆಗಳಲ್ಲಿ ಶಾಂತಿ ಸೌಹಾರ್ದತೆ ಕಾಪಾಡಿ ಕೊಂಡು ಬರಲು, ಕಟ್ಟೆಚ್ಚರ ವಹಿಸುವಂತೆ, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಇಂದು ಹಿರಿಯ ಪೊಲೀಸ್ ಅಧಿಕಾರಿ ಗಳಿಗೆ, ಸೂಚನೆ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ವೊಂದಕ್ಕೆ ಕೆಲವು ಕಿಡಿಗೇಡಿಗಳು, ಕಲ್ಲು ತೂರಾಟ ನಡೆಸಿದ ಘಟನೆಯ ಹಿನ್ನೆಲೆಯಲ್ಲಿ, ಸಚಿವರು, ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಮಾತನಾಡಿ, ಶಾಂತಿ ಸೌಹಾರ್ದತೆ ಕಾಪಾಡಲು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.

ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಅಪರ ಮುಖ್ಯ ಕಾರ್ಯದರ್ಶಿ (ಒಳಾಡಳಿತ) ಶ್ರೀ ರಜನೀಶ್ ಗೋಯಲ್ ಅವರು, ಮಹಾರಾಷ್ಟ್ರ ರಾಜ್ಯ ಮುಖ್ಯ ಕಾರ್ಯದರ್ಶಿ ಯವರ ದೂರವಾಣಿ ಕರೆ ಮೂಲಕ ಸಂಪರ್ಕಿಸಿ, ಘಟನೆಯ ಬಗ್ಗೆ ಚರ್ಚಿಸಿದ್ದಾರೆ.
ಗಡಿ ಭಾಗದ ಜಿಲ್ಲೆಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಮುನ್ನೆಚ್ಚರಿಕೆ ಕ್ರಮವಾಗಿ, ಎರಡೂ ರಾಜ್ಯಗಳ, ಹಿರಿಯ ಪೊಲೀಸ್ ಅಧಿಕಾರಿಗಳೂ ಸಭೆ ನಡೆಸಲಿದ್ದಾರೆ, ಎಂದೂ ಗೃಹ ಸಚಿವರು, ಹೇಳಿದ್ದಾರೆ.

Exit mobile version