Sunday, September 14, 2025
HomeUncategorizedಒಕ್ಕಲು ಮಕ್ಕಳು ಒಕ್ಕಲುತನ ಮೀರಿ ಉದ್ಯಮಿಗಳಾಗಲು ಶ್ರಮಿಸಬೇಕು : ಅಶ್ವಥ್ ನಾರಾಯಣ್

ಒಕ್ಕಲು ಮಕ್ಕಳು ಒಕ್ಕಲುತನ ಮೀರಿ ಉದ್ಯಮಿಗಳಾಗಲು ಶ್ರಮಿಸಬೇಕು : ಅಶ್ವಥ್ ನಾರಾಯಣ್

ಬೆಂಗಳೂರು : ಒಕ್ಕಲು ಮಕ್ಕಳು ಒಕ್ಕಲುತನ ಮೀರಿ ಉದ್ಯಮಿಗಳಾಗಲು ಶ್ರಮಿಸಿದರೆ ಅದಕ್ಕೆ ನಮ್ಮ ಸಂಪೂರ್ಣ ಬೆಂಬಲವಿರುತ್ತದೆ. ಮಣ್ಣಿನ ಮಕ್ಕಳು ಸ್ವತಃ ಶ್ರಮಜೀವಿಗಳು ಉದ್ಯಮಶೀಲತೆಯ ಸ್ಫೂರ್ತಿ ಹೊಂದಿರುವವರು” ಎಂದು ಮಾನ್ಯ ಉನ್ನತ ಶಿಕ್ಷಣ, ಇಲೆಕ್ಟ್ರಾನಿಕ್ಸ್. ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದರು.

ನಗರದ ಅರಮನೆ ಮೈದಾನದಲ್ಲಿ ಆಯಜಿಸಿರುವ ಬೃಹತ್ ಬಿಸಿನೆಸ್ ನೆಟ್ ವರ್ಕಿಂಗ್ ಎಕ್ಸ್ ಪೋ ಹಾಗೂ ವಾರ್ಷಿಕ ಸಮಾವೇಶ ಉದ್ಘಾಟಿಸಿ ಮಾತನಾಡಿದರು. “ಕರ್ನಾಟಕ, ಬೆಂಗಳೂರು ಇಡೀ ವಿಶ್ವಕ್ಕೆ ಆವಿಷ್ಕಾರದ ನಾಡು ಎನಿಸಿದೆ. ಎಲ್ಲಾ ಕ್ಷೇತ್ರದಲ್ಲೂ ಬೆಂಗಳೂರು ವಿಶ್ವಕ್ಕೆ ಮಾದರಿಯಾಗಿದೆ. ಇಂತಹ ಪುಣ್ಯಭೂಮಿ, ಭರವಸೆಯ ನಾಡಿನಲ್ಲಿ ನಾವು ಇದ್ದೇವೆ. ಇಂತಹ ಅವಕಾಶಗಳ ನಾಡಿನ ಶಕ್ತಿಯನ್ನು ಅರಿಯಬೇಕು ಎಂದರು.

ಇನ್ನು, ಉದ್ಯಮಿಗಳಾಗಿ ಯಶಸ್ಸು ಗಳಿಸಿದ ನಂತರ ಅದನ್ನು ಸಮಾಜಕ್ಕೆ ಹಿಂದಕ್ಕೆ ಕೊಡಬೇಕು. ಹೊಸ ಐಡಿಯಾಗಳನ್ನು ಹೊಂದಿರುವ ಉದ್ಯಮಿಗಳಿಗೆ ಸದಾ ನಾನು ಬೆಂಬಲಿಸುತ್ತೇನೆ. ನನ್ನ ಕರ್ತವ್ಯವೇ ಅವರಿಗೆ ಸನ್ನದ್ಧರನ್ನಾಗಿಸುವುದು, ಅವರಿಗೆ ಸೌಲಭ್ಯ ಒದಗಿಸುವುದು. ನಮ್ಮ ಜೊತೆಯಲ್ಲಿರುವ ನೂರಾರು ಮಂದಿ ಇಂದು ಉದ್ಯಮಿಗಳಾಗಿದ್ದಾರೆ. ಅವರ ಪ್ರಯತ್ನಕ್ಕೆ ನಮ್ಮ ಬೆಂಬಲವಷ್ಟೇ. ನಾವು ಉದ್ಯಮಿಗಳಾಗಲು ಬಯಸುವ ಎಲ್ಲರಿಗೂ ಬೆಂಬಲ, ಸಹಕಾರ ನೀಡುತ್ತೇವೆ” ಎಂದರು.

RELATED ARTICLES
- Advertisment -
Google search engine

Most Popular

Recent Comments