Site icon PowerTV

ಪ್ರೇಮಿಗಳ ನಡುವೆ ಜಗಳ ಕೊಲೆಯಲ್ಲಿ ಅಂತ್ಯ..!

ಬೆಂಗಳೂರು : ಪ್ರೇಮಿಗಳ ನಡುವೆ ಜಗಳ ಶುರುವಾಗಿದ್ದು ಕೊಲೆಯಲ್ಲಿ ಅಂತ್ಯ ಕಂಡ ಘಟನೆ ಸಿಲಿಕಾನ್​ ಸಿಟಿಯಲ್ಲಿ ನಡೆದಿದೆ.

ನೇಪಾಳ ಮೂಲದ ಕೃಷ್ಣಕುಮಾರಿ 23 ಕೊಲೆಯಾದ ಯುವತಿ, ಹೊರಮಾವು ಯೂನಿಸೆಕ್ಸ್ ಸ್ಪಾ ದಲ್ಲಿ ಬ್ಯೂಟಿಷಿಯನ್ ಆಗಿದ್ದ ಕೃಷ್ಣಕುಮಾರಿ, ಟಿಸಿಪಾಳ್ಯದಲ್ಲಿ ಬಾರ್ಬರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಸಂತೋಷ್ ದಾಮಿ ಇಬ್ಬರಿಗೂ ಪರಿಚಯವಾಗಿ ಪ್ರೇಮಾಂಕುರವಾಗಿತ್ತು. ಒಂದೇ ರೂಂ ಬಾಡಿಗೆ ಪಡೆದು ಲಿವಿಂಗ್ ರಿಲೇಷನ್ ಶಿಪ್ ನಲ್ಲಿದ್ದ ಪ್ರೇಮಿಗಳು, ಜಗಳತಾರಕ್ಕೇರಿದ್ದು ಕೃಷ್ಣಕುಮಾರಿ ಕೊಲೆಯಲ್ಲಿ ಅಂತ್ಯವಾಗಿದೆ.

ಇನ್ನು, ರಾಮೂರ್ತಿನಗರದ ಟಿಸಿಪಾಳ್ಯದಲ್ಲಿ ರೂಂ ಬಾಡಿಗೆ ಪಡೆದಿದ್ದ ಪ್ರೇಮಿಗಳು, ಇಂದು ಬೆಳಿಗ್ಗೆ ಇಬ್ಬರ ನಡುವೆ ಜಗಳವಾಗಿದೆ. ಘಟನೆ ಸಂಬಂಧ ರಾಮೂರ್ತಿನಗರ ಪೊಲೀಸರು ಸ್ಥಳಕ್ಜೆ ಭೇಟಿ ನೀಡಿದ್ದು, ಸದ್ಯ ಒಂದು ವರ್ಷದ ಹಿಂದೆ ಬೆಂಗಳೂರಿಗೆ ಬಂದಿದ್ದ ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದಾರೆ.

Exit mobile version