Saturday, August 23, 2025
Google search engine
HomeUncategorizedರಾಜ್ಯದ ನೀರಾವರಿ ಯೋಜನೆ, ಜಲಜೀವನ್ ಮಿಷನ್ ಕುರಿತು ಕೇಂದ್ರ ಸಚಿವರ ಜತೆ ಸಿಎಂ ಚರ್ಚೆ

ರಾಜ್ಯದ ನೀರಾವರಿ ಯೋಜನೆ, ಜಲಜೀವನ್ ಮಿಷನ್ ಕುರಿತು ಕೇಂದ್ರ ಸಚಿವರ ಜತೆ ಸಿಎಂ ಚರ್ಚೆ

ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಚರ್ಚಿಸಿದರು.

ಅವರು ಈ ಸಂದರ್ಭದಲ್ಲಿ ಭದ್ರಾ ಮೇಲ್ದಂಡೆ ಯೋಜನೆ, ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ, ಕಳಸಾ ಬಂಡೂರಿ ಯೋಜನೆ ಹಾಗೂ ಮೇಕೆದಾಟು ಯೋಜನೆಗಳ ಕುರಿತು ಚರ್ಚೆ ನಡೆಸಿದರು. ರಾಜ್ಯದ ವಿವಿಧ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ದೊರೆಯ ಬೇಕಾದ ತೀರುವಳಿಗಳನ್ನು ಶೀಘ್ರವೇ ಒದಗಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಜಲಜೀವನ್ ಮಿಷನ್ ಯೋಜನೆ ತೀವ್ರಗತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ರಾಸಾಯನಿಕ, ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ರಾಜ್ಯ ಸಚಿವರಾದ ಭಗವಂತ ಖೂಬ, ಕರ್ನಾಟಕ ರಾಜ್ಯದ ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments