Site icon PowerTV

ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ ನಿಧನ

ಮಂಗಳೂರು : ಖ್ಯಾತ ಯಕ್ಷಗಾನ ಮತ್ತು ತಾಳೆ-ಮದ್ದಳೆ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ (88 ವರ್ಷ) ಅವರು ಇಂದು ನಿಧನರಾಗಿದ್ದಾರೆ.

ಯಕ್ಷಗಾನದ ತೆಂಕತಿಟ್ಟು ಶೈಲಿಯ ಕಲಾವಿದರಾಗಿದ್ದ ಇವರು ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಕೆಲಸ ಮಾಡಿದ್ದರು. 1994 ರಿಂದ 1999 ರವರೆಗೆ ಸುರತ್ಕಲ್ ಕ್ಷೇತ್ರದಿಂದ ಹತ್ತನೇ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿದ್ದರು. ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದರು.

ಮಂಗಳೂರು ವಿಶ್ವವಿದ್ಯಾನಿಲಯದ ಪಿ.ದಯಾನಂದ ಪೈ ಮತ್ತು ಪಿ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದಿಂದ 2018–2019ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಇವರಿಗೆ ಸಂದಿವೆ.

Exit mobile version