Site icon PowerTV

PFI ನಿಷೇಧ: ಕೇಂದ್ರ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಬ್ಯಾನ್ ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನ ಹೈಕೋರ್ಟ್​ ವಜಾ ಮಾಡಿದೆ.

ಕೇಂದ್ರ ಸರ್ಕಾರದ ಪಿಎಫ್​ಐ ಬ್ಯಾನ್​ ಆದೇಶ ಪ್ರಶ್ನಿಸಿ ಬೆಂಗಳೂರಿನ ನಿವಾಸಿ, ಪಿಎಫ್ಐ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ನಾಸಿರ್ ಅಲಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಕೇಸ್​ ಎತ್ತಿಕೊಂಡ ಕರ್ನಾಟಕ ಹೈಕೋರ್ಟ್​ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠದಿಂದ ರಿಟ್​ ಅರ್ಜಿಯನ್ನ ವಜಾ ತೀರ್ಪು ನೀಡಿದೆ.

ಯುಎಪಿಎ ಅಡಿ ಪಿಎಫ್ಐ ಸಂಘಟನೆಯನ್ನ ನಿರ್ಬಂಧ ಮಾಡೋದು ಸರಿಯಲ್ಲ ಎಂದು ಅರ್ಜಿ ಸಲ್ಲಿಸಲಾಗಿತ್ತು. ವಾದ ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿದ್ದ ಹೈಕೋರ್ಟ್, ಕಾನೂನುಬಾಹಿರ ಸಂಘಟನೆ ಎಂದು ಸಂಘಟನೆ ಬ್ಯಾನ್ ಮಾಡಲಾಗಿದೆ. ಕಾನೂನುಬಾಹಿರ ಸಂಘಟನೆ ಎನ್ನಲು ಕಾರಣ ನೀಡಿಲ್ಲ. ತಕ್ಷಣದ ಬ್ಯಾನ್ ಗೆ ಪ್ರತ್ಯೇಕ ಕಾರಣ ನೀಡಬೇಕಿತ್ತು. ವಾದಮಂಡನೆಗೆ ಕಾಲಾವಕಾಶ ನೀಡದೇ ಬ್ಯಾನ್ ಮಾಡಲಾಗಿದೆ. ಯುಎಪಿಎ ಕಾಯ್ದೆಗೆ ವಿರುದ್ಧವಾಗಿ ಆದೇಶ ಹೊರಡಿಸಲಾಗಿದೆ.

ಪಿಎಫ್ಐ ಸಂಘಟನೆಯಿಂದ ದೇಶವಿರೋಧಿ ಚಟುವಟಿಕೆ ನಡೆಯುತ್ತಿದೆ. ದೇಶದಲ್ಲಿ ಹಿಂಸಾತ್ಮಕ ಕೃತ್ಯಗಳನ್ನು ಎಸಗುತ್ತಿದ್ದಾರೆ. ಸಂಘಟನೆಯ ಸದಸ್ಯರಿಂದ ಭೀತಿಯ ವಾತಾವರಣ ಸೃಷ್ಟಿಯಾಗಿದೆ. ಹೀಗಾಗಿ ಸಕಾರಣವಾಗಿಯೇ ಪಿಎಫ್ಐ ನಿರ್ಬಂಧಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು.

 

Exit mobile version