Saturday, August 23, 2025
Google search engine
HomeUncategorizedಗುಜರಾತ್ ವಿಧಾನಸಭಾ ಚುನಾವಣೆ: ಮೊದಲ ಹಂತದ ಮತದಾನ ಇಂದು

ಗುಜರಾತ್ ವಿಧಾನಸಭಾ ಚುನಾವಣೆ: ಮೊದಲ ಹಂತದ ಮತದಾನ ಇಂದು

ಗುಜರಾತ್ : ವಿಧಾನಸಭೆಗೆ ಗುರುವಾರ (ಡಿ.1) ಮೊದಲ ಹಂತದ ಮತದಾನ ನಡೆಯಲಿದೆ. ಸೌರಾಷ್ಟ್ರ, ಕಛ್, ರಾಜ್ಯದ ದಕ್ಷಿಣ ಭಾಗ ಒಳಗೊಂಡ 19 ಜಿಲ್ಲೆಗಳ 89 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. 70 ಮಹಿಳೆಯರು ಸೇರಿ ಒಟ್ಟಾರೆ 788 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

14,382 ಮತಗಟ್ಟೆಗಳಲ್ಲಿ ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. 2017ರ ಚುನಾವಣೆಯಲ್ಲಿ ಈ 89 ಕ್ಷೇತ್ರಗಳ ಪೈಕಿ 48 ಕ್ಷೇತ್ರಗಳನ್ನು ಆಡಳಿತಾರೂಢ ಬಿಜೆಪಿ ಗೆದ್ದುಕೊಂಡಿತ್ತು. 40 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು.
ಬಿಜೆಪಿ, ಕಾಂಗ್ರೆಸ್, ಎಎಪಿ ಸೇರಿದಂತೆ 36 ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. 339 ಪಕ್ಷೇತರ ಅಭ್ಯರ್ಥಿಗಳೂ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಗುರುವಾರ ಮತದಾನ ನಡೆಯಲಿರುವ ಕ್ಷೇತ್ರಗಳಲ್ಲಿ ಎಎ‍ಪಿ ಮುಖ್ಯಮಂತ್ರಿ ಅಭ್ಯರ್ಥಿ ಈಸುದಾನ್ ಗಢವಿ, ರಾಜ್ಯ ಘಟಕದ ಅಧ್ಯಕ್ಷ ಗೋಪಾಲ್ ಇಟಾಲಿಯಾ ಅವರು ಸ್ಪರ್ಧಿಸಿರುವ ಕ್ಷೇತ್ರಗಳೂ ಇವೆ. ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾ ಜಡೇಜಾ, ಶಾಸಕರಾದ ಹರ್ಷ ಸಂಘವಿ, ಪೂರ್ಣೇಶ್ ಮೋದಿ, ಪುರುಷೋತ್ತಮ್ ಸೋಳಂಕಿ ಅವರು ಮೊದಲ ಹಂತದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಪ್ರಮುಖರಾಗಿದ್ದಾರೆ.

ರಾಜ್ಯದ ಒಟ್ಟು 4.91 ಕೋಟಿ ಮತದಾರರ ಪೈಕಿ 2.39 ಕೋಟಿ ಮತದಾರರು ಮೊದಲ ಹಂತದಲ್ಲಿ ಹಕ್ಕು ಚಲಾವಣೆಗೆ ಸಜ್ಜಾಗಿದ್ದಾರೆ. ಇದೇ 5ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, 8ರಂದು ಮತ ಎಣಿಕೆ ನಡೆಯಲಿದೆ.

RELATED ARTICLES
- Advertisment -
Google search engine

Most Popular

Recent Comments