Site icon PowerTV

ಜಾತ್ರ ಮಹೋತ್ಸಗಳಲ್ಲಿ ಮುಂದುವರೆದ ಧರ್ಮ ದಂಗಲ್ ತಿಕ್ಕಾಟ

ಬೆಂಗಳೂರು : ರಾಗಿ ಗುಡ್ಡ ಆಂಜನೇಯ ಸ್ವಾಮಿ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹಾಕುವಂತೆ ಹಿಂದೂ ಜಾಗರಣ ವೇದಿಕೆ ಮೋಹನ್ ಗೌಡ ಆಗ್ರಹಿಸಿದ್ದಾರೆ.

ಇನ್ನು, ಇಂದಿನಿಂದ ಶುರುವಾಗಲಿರುವ ಜಾತ್ರಾ ಮಹೋತ್ಸವ, ಡಿಸೆಂಬರ್ 11 ರವರೆಗೆ ನಡೆಯಲಿದೆ. ಈ ವೇಳೆ ಲಕ್ಷಾಂತರ ಜನರು ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡದಂತೆ ಹಿಂದೂ ಜಾಗರಣ ವೇದಿಕೆ ಮೋಹನ್ ಗೌಡ ಆಗ್ರಹಿಸಿದ್ದಾರೆ.

ಇನ್ನು, ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧಕ್ಕೆ ಆಗ್ರಹ ಹಿನ್ನೆಲೆ ಹೆಚ್ಚಿನ ಪೊಲೀಸ್ ಆಯೋಜಿಸಿದ್ದು, ದೇವಸ್ಥಾನದ ಮುಖ್ಯದ್ವಾರದಲ್ಲಿ ಅಂಗಡಿ ಮುಂಗಟ್ಟುಗಳನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಪೊಲೀಸ್ ಇಲಾಖೆ ನಿಯೋಜನೆ ಮಾಡಿದೆ.

Exit mobile version