Site icon PowerTV

ಚುನಾವಣಾ ಆಯುಕ್ತರ ನೇಮಕ: ನೂತನ ಸಮಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು : ದೇಶದಲ್ಲಿ ಚುನಾವಣಾ ಮುಖ್ಯ ಆಯುಕ್ತರು ಹಾಗೂ ಚುನಾವಣಾ ಆಯುಕ್ತರ ನೇಮಕ ಸಂಬಂಧ ಸುಪ್ರೀಂಕೋರ್ಟ್ ಹೊಸ ಸಮಿತಿಯನ್ನು ರಚಿಸಿದೆ. ಈ ಸಮಿತಿಯಲ್ಲಿ ಪ್ರಧಾನಿ ನರೇಂದ್ರ ಮೀದಿ ಇರಲಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತರ ನೇಮಕಕ್ಕೆ ಕೊಲಿಜಿಯಂ ಸ್ವರೂಪದ ವ್ಯವಸ್ಥೆ ಬೇಕು ಎಂದು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಂ. ಜೋಸೆಫ್ ನೇತೃತ್ವದ ಐವರು ಸದಸ್ಯರ ಸಂವಿಧಾನ ಪೀಠವು, ಚುನಾವಣಾ ಆಯುಕ್ತರ ನೇಮಕಕ್ಕೆ ಹೊಸ ಸಮಿತಿಯನ್ನು ರಚಿಸಿದೆ.

ಸಮಿತಿಯಲ್ಲಿ ಪ್ರಧಾನಿ ಮೋದಿ ಜೊತೆ ಇವರು..

ನೂತನ ಸಮಿತಿಯಲ್ಲಿ ಪ್ರಧಾನಮಂತ್ರಿ, ಲೋಕಸಭೆ ವಿರೋಧ ಪಕ್ಷದ ನಾಯಕ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿಗಳು ಇರುತ್ತಾರೆ ಎಂದು ಸಾಂವಿಧಾನಿಕ ಪೀಠ ಹೇಳಿದೆ. ಈ ನೇಮಕಾತಿಗಳಿಗೆ ಸಂಸತ್ತು ಕಾನೂನು ರಚಿಸುವವರೆಗೆ ಈ ನಿಯಮವು ಮುಂದುವರಿಯುತ್ತದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಇದನ್ನೂ ಓದಿ : ತ್ರಿಪುರಾ ಚುನಾವಣೆ ಫಲಿತಾಂಶ : ಭರ್ಜರಿ ಗೆಲುವು ದಾಖಲಿಸಿದ ಬಿಜೆಪಿ

ಈ ಸಾಂವಿಧಾನಿಕ ಪೀಠದಲ್ಲಿ ನ್ಯಾಯಮೂರ್ತಿ ಕೆ.ಎಂ. ಜೋಸೆಫ್, ಅಜಯ್ ರಸ್ತೋಗಿ, ಅನಿರುದ್ಧ ಬೋಸ್, ಹೃಷಿಕೇಶ್ ರಾಯ್ ಮತ್ತು ಸಿ.ಟಿ. ರವಿ ಕುಮಾರ್ ಇದ್ದರು. ಐವರು ನ್ಯಾಯಮೂರ್ತಿಗಳ ಸರ್ವಾನುಮತದ ತೀರ್ಪಿನಲ್ಲಿ ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರನ್ನು ಸಮಿತಿಯ ಸಲಹೆಯ ಮೇರೆಗೆ ರಾಷ್ಟ್ರಪತಿಗಳು ಆಯ್ಕೆ ಮಾಡುತ್ತಾರೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ನೇಮಕಾತಿ ಪ್ರಕ್ರಿಯೆ ಹೇಗೆ?

ಸಂವಿಧಾನದ 324ನೇ ವಿಧಿ ಪ್ರಕಾರ ಕೇಂದ್ರ ಸಚಿವ ಸಂಪುಟದ ಶಿಫಾರಸಿನ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇಂದ್ರ ಚುನಾವಣಾ ಆಯುಕ್ತರನ್ನು ನೇಮಿಸುತ್ತಾರೆ. ವಿವೇಚನಾ ಅಧಿಕಾರ ಹೊಂದಿರುವ ಅವರು ಐಎಎಸ್ ಕೇಡರ್ ನಿಂದ ಆಯ್ಕೆಯಾಗಲಿದ್ದಾರೆ.

Exit mobile version