Site icon PowerTV

ಕೊಲೆ, ಸುಲಿಗೆ, ಲೂಟಿ ಕಾಂಗ್ರೆಸ್ ಮಾಡಿದ ಕರ್ಮಕಾಂಡ ಒಂದಾ? ಎರಡಾ? : ಸಿಎಂ ಬೊಮ್ಮಾಯಿ ಗರಂ

ಬೆಂಗಳೂರು : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಲಂಚ ಪ್ರಕರಣ ಸಂಬಂಧ ಸಿಎಂ ರಾಜೀನಾಮೆ ಹಾಗೂ ಪ್ರತಿಭಟನೆ ಮಾಡುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಎಂದು ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಜನರಿಗೆ ಗೊತ್ತಿದೆ. ಯಾರು, ಯಾಕೆ ಪ್ರತಿಭಟನೆ ಮಾಡುತ್ತಿದ್ದಾರೆ. ತಪ್ಪು ಗಳನ್ನು ಮುಚ್ಚಿಹಾಕಿಕೊಳ್ಳಲು ಮತ್ತೆ ಅಧಿಕಾರಕ್ಕೆ ಬರಬೇಕೆಂದು ಇವರು ಇದನ್ನು ಮಾಡುತ್ತಾರೆ.

ಕಾಂಗ್ರೆಸ್ ಮಾಡಿದ ಕರ್ಮಕಾಂಡ ಯಾರೂ ಮರೆತಿಲ್ಲ. ಕೊಲೆ, ಸುಲಿಗೆ, ಭ್ರಷ್ಟಾಚಾರ, ಲೂಟಿ ಮಾಡಿದ್ದಾರೆ. ಅವರ ಕಾಲದ 59 ಕೇಸ್ ಲೋಕಾಯುಕ್ತಕ್ಕೆ  ವಹಿಸಿದ್ದು ಸತ್ಯ ಹೊರಗೆ ಬರಲಿದೆ ಎಂದು ಕುಟುಕಿದ್ದಾರೆ.

ಇದನ್ನೂ ಓದಿ : ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟ ಸಿದ್ದು-ಡಿಕೆಶಿಗೆ ‘ಪರಂ’ ಪಂಚ್..!

ತಪ್ಪು ಮುಚ್ಚಿಹಾಕುವುದು ಕಾಂಗ್ರೆಸ್ ನೈತಿಕತೆ

ಲೋಕಾಯುಕ್ತಕ್ಕೆ ಮುಕ್ತ ಅಧಿಕಾರ ನೀಡಿ ಯಾರೇ ತಪ್ಪು ಮಾಡಿದರೂ ಕೂಡ ನಾವು ಕ್ರಮ ತೆಗೆದುಕೊಳ್ಳಲು ಸಿದ್ದ ಎನ್ನುವುದು ನಮ್ಮ ನೈತಿಕತೆ. ತಪ್ಪುಗಳನ್ನು ಮುಚ್ಚಿಹಾಕುವುದು ಕಾಂಗ್ರೆಸ್ ನೈತಿಕತೆ ಎಂದು ಬಸವರಾಜ ಬೊಮ್ಮಾಯಿ ಆರೋಪ ಮಾಡಿದ್ದಾರೆ.

ಸಿದ್ದರಾಮಯ್ಯ ಯಾಕೆ ರಾಜೀನಾಮೆ ಕೊಡ್ಲಿಲ್ಲ

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಿದ್ದಾಗ ಅವರ ಸಚಿವರ ಕಚೇರಿಯಲ್ಲಿ 25 ಲಕ್ಷ ರೂ. ಲಂಚ ಪಡೆಯುತ್ತಿರುವಾಗ ಸಿಕ್ಕಿಹಾಕಿಕೊಂಡಿದ್ದರು. ಅಂದು ಅವರು ರಾಜೀನಾಮೆ ನೀಡಲಿಲ್ಲ. ಲೋಕಾಯುಕ್ತ ಇದ್ದಿದ್ದರೆ ಅವರ ಮೇಲೆ ಪ್ರಕರಣ ದಾಖಲಾಗುತ್ತಿತ್ತು. ಅವರು ಭ್ರಷ್ಟಾಚಾರ ಮುಚ್ಚಿಹಾಕಲು ಪ್ರಯತ್ನ ಮಾಡಿದರು ಎಂದು ಸಿದ್ದು ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Exit mobile version