Site icon PowerTV

ವಿವಾದಾತ್ಮಕ : ರಾಹುಲ್ ಗಾಂಧಿಗೆ ಮಕ್ಕಳಾಗಲ್ಲ..!

ಬೆಂಗಳೂರು : ರಾಜ್ಯದಲ್ಲಿ ಬಿಸಿಲ ಝಳದ ನಡುವೆಯೇ ವಿಧಾನಸಭಾ ಚುನಾವಣೆ ಬಿಸಿ ಹೆಚ್ಚುತ್ತಿದೆ. ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರು ಒಬ್ಬರ ಮೇಲೆ ಒಬ್ಬರು ಆರೋಪ, ಪ್ರತ್ಯಾರೋಪ ಮಾಡುತ್ತಿರುವುದು ಸಾಮಾನ್ಯವಾಗಿದೆ. ಆದರೆ, ನಳಿನ್ ಕುಮಾರ್ ಕಟೀಲ್ ಡ್ಯಾಮೇಜಿಂಗ್ ಸ್ಟೇಟ್ಮೆಂಟ್ ನೀಡಿದ್ದಾರೆ.

ಹೌದು, ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಸಂಸದ ರಾಹುಲ್ ಗಾಂಧಿ ಅವರ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದಕ್ಕೆ ಕಾಂಗ್ರೆಸ್ ನಾಯಕರು ಕೆರಳಿ ಕೆಂಡವಾಗಿದ್ದಾರೆ.

ಬಿಜೆಪಿ ಹಮ್ಮಿಕೊಂಡಿದ್ದ ಸಮಾರಂಭವೊಂದರಲ್ಲಿ ಭಾಷಣ ಮಾಡಿರುವ ನಳಿನ್ ಕುಮಾರ್ ಕಟೀಲ್ ರಾಹುಲ್ ಗಾಂಧಿಯನ್ನೇ ಗುರಿಯಾಗಿಸಿಕೊಂಡು ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮಕ್ಕಳು ಆಗಲ್ಲ ಎಂದು ಹೇಳಿಕೆ ನೀಡಿ ವಿವಾದ ಮೈ ಮೇಲೆ ಎಳೆದುಕೊಂಡಿದ್ದಾರೆ.

ಇದನ್ನೂ ಓದಿ : ಪ್ರಧಾನಿ ಮೋದಿ ಬಂದು ಇಲ್ಲಿ ಆಳ್ತಾನ? : ಏಕವಚನದಲ್ಲೇ ಖರ್ಗೆ ವಾಗ್ದಾಳಿ

ಕಟೀಲ್ ಹೇಳಿಕೆ ಹೀಗಿತ್ತು..!

‘ಕೋವಿಡ್ ಲಸಿಕೆ ತೆಗೆದುಕೊಳ್ಳಬೇಡಿ ಮಕ್ಕಳಾಗಲ್ಲ ಎಂದು ರಾಹುಲ್ ಗಾಂಧಿ, ಸಿದ್ರಾಮಣ್ಣ ಹೇಳ್ತಾ ಇದ್ರು. ಆದರೆ, ಅವರಿಬ್ಬರೂ ರಾತ್ರಿ ಕದ್ದು ಕೊರೊನಾ ಲಸಿಕೆ ಹಾಕಿಸಿಕೊಂಡ್ರು. ಒಬ್ಬ ಎಂಎಲ್ ಸಿ ಇದನ್ನೇ ಹೇಳ್ತಾ ಇದ್ರು, ಅದಕ್ಕೆ ರಾಹುಲ್ ಗಾಂಧಿ ಮದುವೆಯಾಗಿಲ್ಲ. ಹೇಗೋ ಮಕ್ಕಳಾಗಲ್ಲ ಅಲ್ವಾ?’ ಎಂದು ನಳಿನ್ ಕುಮಾರ್ ಲೇವಡಿ ಮಾಡಿದ್ದಾರೆ.

ಲಸಿಕೆಗೆ ಕೈ ನಾಯಕರ ವಿರೋಧ

ದೇಶದಲ್ಲಿ ಕೊರೊನಾ ಹಾವಳಿ ಹೆಚ್ಚಾದಾಗ ಕೇಂದ್ರ ಸರ್ಕಾರ ಲಸಿಕೆ ಪಡೆಯುವಂತೆ ಸೂಚನೆ ನೀಡಿತ್ತು. ಆ ವೇಳೆ ರಾಜ್ಯ ಕಾಂಗ್ರೆಸ್ ನಾಯಕರು ಸೇರಿದಂತೆ ಕೇಂದ್ರ ನಾಯಕರು ಲಸಿಕೆ ತಗೊಂಡ್ರೆ ಕೊರೊನಾ ಓಡಿ ಹೋಗುತ್ತಾ? ಎಂದು ವ್ಯಂಗ್ಯವಾಡಿದ್ದರು. ಇದನ್ನೇ ಗುರಿಯಾಗಿಸಿಕೊಂಡು ನಳಿನ್ ಕುಮಾರ್ ಕಟೀಲ್ ಕೈ ನಾಯಕರ ವಿರುದ್ಧ ಗುಡುಗಿದ್ದಾರೆ.

Exit mobile version