Site icon PowerTV

ಜೆಡಿಎಸ್ ಪಂಚರತ್ನ ಯಾತ್ರೆ ವಾಹನದ ಮೇಲೆ ಕಲ್ಲು ತೂರಾಟ

ಬೆಂಗಳೂರು : ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ದೇವತಗಲ್ ಗ್ರಾಮದಲ್ಲಿ ಜೆಡಿಎಸ್ ಪಂಚರತ್ನ ಪ್ರಚಾರದ ವೇಳೆ ಗಲಾಟೆ ನಡೆದಿದೆ.

ಜೆಡಿಎಸ್ ಪ್ರಚಾರದ ಸ್ಕ್ರೀನ್ ವಾಹನದ ಮೇಲೆ ಕಲ್ಲುತೂರಾಟ ನಡೆದಿದ್ದು, ಚಾಲಕನ ತಲೆಗೆ ಗಾಯವಾಗಿದೆ. ದೇವತಗಲ್ ಗ್ರಾಮದಲ್ಲಿ ಜೆಡಿಎಸ್ ಪ್ರಚಾರ ಮಾಡದಂತೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ವಾಹನದ ಮೇಲೆ ಕಲ್ಲುತೂರಾಟ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆಯಲ್ಲಿ ಗಾಯಗೊಂಡ ಚಾಲಕನನ್ನು ದೇವದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲ್ಲು ತೂರಾಟ ಮಾಡಿದವರ ಮೇಲೆ ಕ್ರಮಕ್ಕೆ ಒತ್ತಾಯಿಸಲಾಗಿದೆ. ದೇವದುರ್ಗ ಜೆಡಿಎಸ್ ಅಭ್ಯರ್ಥಿ ಕರೆಮ್ಮ ನಾಯಕ್ ಜಾಲಹಳ್ಳಿ ಪೊಲೀಸ್ ಠಾಣೆಗೆ ದೌಡಾಯಿಸಿದ್ದು ದೂರು ನೀಡಿದ್ದಾರೆ.

ಇದನ್ನೂ ಓದಿ : ದೇವೇಗೌಡ್ರು ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್

ಹಲ್ಲೆ ಮಾಡಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಕರೆಮ್ಮ ನಾಯಕ್ ಒತ್ತಾಯಿಸಿದ್ದಾರೆ. ಜಾಲಹಳ್ಳಿ ಪೊಲೀಸ್ ಠಾಣೆ ಎದುರು ಜೆಡಿಎಸ್ ಕಾರ್ಯಕರ್ತರು ಜಮಾಯಿಸಿದ್ದಾರೆ.

ಮಾ.26ಕ್ಕೆ ಪಂಚರತ್ನ ಸಮಾರೋಪ

ಜೆಡಿಎಸ್ ಪಕ್ಷದ ಮಹತ್ವಕಾಂಕ್ಷೆಯ ಪಂಚರತ್ನ ರಥೆಯಾತ್ರೆಯ ಸಮಾರೋಪ ಸಮಾರಂಭ ಮಾರ್ಚ್ 26ರಂದು ಮೈಸೂರಿನಲ್ಲಿ ನಡೆಯಲಿದೆ ಎಂದು  ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಇದು ನನ್ನ ರಾಜಕೀಯ ಜೀವನದ ಇತಿಹಾಸದಲ್ಲಿಯೇ ಮಹೋನ್ನತ ಸಮಾವೇಶ ಆಗಲಿದೆ. ಈವರೆಗೂ ಯಾರೂ ಮಾಡಿರದಂಥ ಸಮಾವೇಶ ಸಮಾರೋಪ ನಡೆಯಲಿದೆ ತಿಳಿಸಿದ್ದಾರೆ.

Exit mobile version