Site icon PowerTV

ಬಿಎಸ್ ವೈ ಸ್ಫೋಟಕ ಹೇಳಿಕೆ : ಶೀಘ್ರ ಸಚಿವ ಸೋಮಣ್ಣ ಭೇಟಿ

ಬೆಂಗಳೂರು : ವಸತಿ ಸಚಿವ ವಿ. ಸೋಮಣ್ಣ ಹಾಗೂ ನಾರಾಯಣಗೌಡ ಅವರು ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ವಿಚಾರದ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಅವರು ಪ್ರತಿಕ್ರಿಯೆ ನೀಡಿದ್ದಾರೆ.

ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಯಡಿಯೂರಪ್ಪ, ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಬಗ್ಗೆ ಯಾವುದೇ ಸತ್ಯಾಂಶವಿಲ್ಲ. ಎಲ್ಲರೂ ನಮ್ಮ ಜೊತೆ ಇರುತ್ತಾರೆ. ಸಚಿವ ವಿ. ಸೋಮಣ್ಣ, ನಾರಾಯಣಗೌಡ ಸೇರಿ ಯಾರೊಬ್ಬರೂ ಬಿಜೆಪಿ ಬಿಡುವದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ನಾನು ಬೆಂಗಳೂರಿಗೆ ಹೋದ ಮೇಲೆ ಎಲ್ಲರನ್ನೂ ಭೇಟಿಯಾಗುತ್ತೇನೆ. ಸೋಮಣ್ಣ ಹಾಗೂ ನಾರಾಯಣಗೌಡ ಕಾಂಗ್ರೆಸ್ ಪಕ್ಷ ಸೇರ್ಪಡೆ ವಿಚಾರ ಸತ್ಯಕ್ಕೆ ದೂರವಾಗಿದೆ. ಸಚಿವರುಗಳಿಗೆ ಆಗಿರುವ ಅಸಮಾಧಾನವನ್ನು ಮುಖ್ಯಮಂತ್ರಿಗಳು ಬಗೆಹರಿಸಲಿದ್ದಾರೆ. ಈ ಕುರಿತಂತೆ ನಾನು ಅವರನ್ನು ಭೇಟಿ ಮಾಡುವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಮತ್ತೊಮ್ಮೆ ಬಿಜೆಪಿಗೆ ಕರ್ನಾಟಕದಲ್ಲಿ ಅಧಿಕಾರ ಕೊಡಿ

ಸಿದ್ದರಾಮಯ್ಯ ಹೇಳಿಕೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಎಷ್ಟೇ ಬಾರಿ ಬಂದರೂ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂಬ ಸಿದ್ದರಾಮಯ್ಯ ಹೇಳಿಕೆ ಯಡಿಯೂರಪ್ಪ ತಿರುಗೇಟು ಕೊಟ್ಟಿದ್ದಾರೆ. ಸಿದ್ದರಾಮಯ್ಯ ಹೇಳಿಕೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಜರಿದಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಈ ರೀತಿ ಹೇಳುವುದು ಸ್ವಾಭಾವಿಕವಾಗಿದೆ. ಅವರ ಹೇಳಿಕೆಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ರಾಜ್ಯದಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Exit mobile version