Friday, August 22, 2025
Google search engine
HomeUncategorizedಕಟೀಲ್ ಸ್ಫೋಟಕ ಹೇಳಿಕೆ : ಕಾಂಗ್ರೆಸ್-ಜೆಡಿಎಸ್ ಮನೆ ಖಾಲಿ!

ಕಟೀಲ್ ಸ್ಫೋಟಕ ಹೇಳಿಕೆ : ಕಾಂಗ್ರೆಸ್-ಜೆಡಿಎಸ್ ಮನೆ ಖಾಲಿ!

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ನಾಯಕರಿಗೆ ಶಾಕಿಂಗ್ ಹೇಳಿಕೆ ಕೊಟ್ಟಿದ್ದಾರೆ. ಹಲವು ನಾಯಕರು ಬಿಜೆಪಿ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷದ ಮನೆ ತುಂಬುತ್ತಿದೆ. ಆದರೆ, ಕಾಂಗ್ರೆಸ್ ಪಕ್ಷ ಹಾಗೂ ಜೆಡಿಎಸ್ ಪಕ್ಷದ ಮನೆಗಳು ಖಾಲಿ ಆಗುತ್ತಿವೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕರ ಹಗಲುಗನಸು

ರಾಜ್ಯದಲ್ಲಿ ಆಡಳಿತಕ್ಕೆ ಬರುತ್ತೇವೆ ಎಂದು ರಾಜ್ಯದ ಕಾಂಗ್ರೆಸ್ ನಾಯಕರು ಕನಸು ಕಾಣುತ್ತಿದ್ದಾರೆ. ಇದು ಕೇವಲ ಹಗಲುಗನಸಾಗಲಿದೆ. ಚೆನ್ನಾಗಿ ಕೆಲಸ ಮಾಡಿ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು. ಆ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು ಎಂದು ನಳಿನ್ ಕುಮಾರ್ ಕಟೀಲ್ ಕಾರ್ಯಕರ್ತರಿಗೆ ಕರೆ ಕೊಟ್ಟಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್ ‘ಕೈ’ ಆಟ ನಡೆಯೊಲ್ಲ : ಸಿಎಂ ಬೊಮ್ಮಾಯಿ

ಬಿಜೆಪಿಯಿಂದ ಮಾತ್ರ ರಾಜ್ಯದ ಕಲ್ಯಾಣ

ಜನರು ಡಬಲ್ ಎಂಜಿನ್ ಸರ್ಕಾರಗಳ ಸಾಧನೆಯನ್ನು ಒಪ್ಪಿಕೊಂಡಿದ್ದಾರೆ. ರಾಜ್ಯದೆಲ್ಲೆಡೆ ಬಿಜೆಪಿ ಪರ ಅಲೆ ಇದೆ. ದೇಶದ ಅಭಿವೃದ್ಧಿ, ರಾಜ್ಯದ ಕಲ್ಯಾಣ ಕೇವಲ ಬಿಜೆಪಿಯಿಂದ ಮಾತ್ರ ಸಾಧ್ಯ ಎಂಬ ಭಾವನೆ ಜನರಲ್ಲಿದೆ ಎಂದು ಕಟೀಲ್ ಹೇಳಿದ್ದಾರೆ.

ವಿರೋಧ ಪಕ್ಷವಾಗಲು ನಾಲಾಯಕ್

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಅಧಿಕಾರಕ್ಕೆ ಬರಲಿದೆ. 3 ರಾಜ್ಯಗಳ ಫಲಿತಾಂಶ ಗಮನಿಸಿದರೆ ಕಾಂಗ್ರೆಸ್ ಪಕ್ಷವು ಶೂನ್ಯದತ್ತ ನಡೆಯುತ್ತಿರುವುದು ಸ್ಪಷ್ಟವಾಗುತ್ತಿದೆ. ವಿರೋಧ ಪಕ್ಷವಾಗಲು ನಾಲಾಯಕ್ ಎಂಬ ಸ್ಥಿತಿಯಲ್ಲಿ ಕಾಂಗ್ರೆಸ್ ಇದೆ ಎಂದು ಕಟೀಲ್ ಲೇವಡಿ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments